ಮಾತುಬಾರದ ಮಹಿಳೆಯ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ್ರು
ಬೆಂಗಳೂರು, ಮಾರ್ಚ್ 19: ಮಾತು ಬಾರದ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.
ಕೃಷಿ ಭೂಮಿಯ ಜೋಳದ ಪೊದೆಯೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ದೊಡ್ಡಬೆಲೆ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ.

ಮೃತ ಮಹಿಳೆ ಇದೇ ಗ್ರಾಮದ 48 ವರ್ಷ ವಯಸ್ಸಿನ ಗಂಗಮ್ಮ ಎಂದು ಗುರುತಿಸಲಾಗಿದೆ. ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ ಮೈಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.












Click it and Unblock the Notifications