Varthur Flyover: ವರ್ತೂರು ಫ್ಲೈಓವರ್‌ಗೆ ಭಾರಿ ವಿರೋಧ, ಹೊಸ ಡಿಮ್ಯಾಂಡ್ ಇಟ್ಟ ಸಿಟಿ ಮಂದಿ
ಪೂರ್ವ ಬೆಂಗಳೂರಿನ ಭಾಗದಲ್ಲಿ ಸುಗಮ ಸಂಚಾರಕ್ಕಾಗಿ ವರ್ತೂರಿನಲ್ಲಿ 488 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ದೇಶಿಸಲಾಗಿದೆ. ಆದರೆ, ಇದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ವರ್ತೂರು ನಾಗರಿಕ ಹಿತ ರಕ್ಷಣಾ ವೇದಿಕೆಯ ಸದಸ್ಯರು ಫ್ಲೈಓವರ್ ನಿರ್ಮಾಣ ವಿರೋಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ವಿವರವಾದ ಪತ್ರ ಕೂಡ ಸಲ್ಲಿಸಿದ್ದಾರೆ. ಈ ಮೇಲ್ಸೇತುವೆ ಬೇಡ ಎನ್ನಲು ಕಾರಣವೇನು? ಎಂಬ ಮಾಹತಿ ಇಲ್ಲಿದೆ.
ವರ್ತೂರು ಭಾಗದಲ್ಲಿ ಈ ಫ್ಲೈಓವರ್ ನಿರ್ಮಾಣಕ್ಕೆ 2022ರಲ್ಲಿ ಬಿಜೆಪಿ ಸರ್ಕಾರದ ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ಸಿಕ್ಕಿತ್ತು. ಈ ಸುಮಾರು 1.92 ಕಿ.ಮೀ ಉದ್ದ ಮತ್ತು 60 ಅಡಿ ಅಗಲದ ಈ ಮೇಲ್ಸೇತುವೆಯನ್ನು ಯೋಜಿಸಲಾಗಿದೆ. ಇದನ್ನು ವಿಸ್ತರಿಸುವುದನ್ನು ಕೂಡ ಒಳಗೊಂಡಿತ್ತು. ಆದರೆ ಇದು ಒಮ್ಮೆ ನಿರ್ಮಾಣವಾದರೆ ಫ್ಲೈಓವರ್‌ನಿಂದ ಹೆಚ್ಚಿನ ಖಾಸಗಿ ವಾಹನಗಳ ಓಡಾಟಕ್ಕೆ ಕಾರಣವಾಗುತ್ತೆ. ಇದರಿಂದ ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಕೂಡ ಹೆಚ್ಚಾಗುತ್ತೆ ಎಂದು ಇಲ್ಲಿನ ಸ್ಥಳೀಯರು ದೂರಿದ್ದಾರೆ. ಈ ಯೋಜನೆಯು ಭವಿಷ್ಯದ ನಗರ ಯೋಜನೆಯನ್ನು ಒಳಗೊಂಡಿಲ್ಲ. ಏಕೆಂದರೆ ಇದು ಕೆಲವೇ ವರ್ಷಗಳಲ್ಲಿ ತುಂಬಿ ಹೋಗುತ್ತೆ ಎಂದು ಕಾರಣ ನೀಡಿದ್ದಾರೆ.

ಇದು ನಗರದಲ್ಲಿ ದೈನಂದಿನ ಸಂಚಾರವನ್ನು ಸುಗಮಗೊಳಿಸುವ ಮತ್ತು ದಟ್ಟಣೆಯನ್ನು ಕಡಿಮೆ ಮಾಡುವುದಾದರೂ ಬೆಂಗಳೂರಿನ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೇಲ್ಸೇತುವೆ ಬದಲಾಗಿ, ಜಿಗಣಿಯಿಂದ ಕಾಡುಗೋಡಿ ಟ್ರೀ ಪಾರ್ಕ್‌ಗೆ ವರ್ತೂರು ಮೂಲಕ ಸಂಪರ್ಕಿಸುವ ಮೆಟ್ರೋ ಮಾರ್ಗವನ್ನು ವಿಸ್ತರಿಸುವಂತೆ ಅವರು ಕೇಳಿದ್ದಾರೆ. ಭವಿಷ್ಯದ ನಗರವಾಗಿ ಸಿದ್ಧವಾಗಿರುವ ಪೂರ್ವ ಕಾರಿಡಾರ್‌ಗೆ ಇದು ಬಹಳ ಸಹಾಯ ಮಾಡುತ್ತದೆ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ.
ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸದೆ ಈ ಮೇಲ್ಸೇತುವೆ ಯೋಜನೆ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ವಿವರವಾದ ಯೋಜನಾ ವರದಿ (ಡಿಪಿಆರ್) ನಂತಹ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ಸಹ ಹಂಚಿಕೊಂಡಿಲ್ಲ. ಎಂದು ಅವರು ಹೇಳಿದರು. 2018ರಿಂದಲೂ ಈ ಯೋಜನೆಯನ್ನು ನಿವಾಸಿಗಳು ವಿರೋಧಿಸುತ್ತಿದ್ದಾರೆ. ಯೋಜನೆಯ ವೆಚ್ಚವು 187 ಕೋಟಿ ರೂಪಾಯಿಗಳಿಂದ 488 ಕೋಟಿ ರೂಪಾಯಿಗಳಿಗೆ ಏರಿದೆ. ಆದರೆ ಸರ್ಕಾರ ಏಕೆ ಎಂದು ಎಂದಿಗೂ ವಿವರಿಸಲಿಲ್ಲ ಎಂದು ಆರೋಪಿಸಿದ್ದಾರೆ.

ಮೇಲ್ಸೇತುವೆಗೆ ವಿರೋಧ ಏಕೆ?
ಈ ಮೇಲ್ಸೇತುವೆಯು ಕೆಟ್ಟ ಕಲ್ಪನೆಯಿಂದ ಕೂಡಿದೆ, ಅಲ್ಲದೆ ಪರಿಸರಕ್ಕೂ ಹಾನಿಕಾರಕ. ಇದು ಬೆಂಗಳೂರಿನ ಭವಿಷ್ಯದ ಅಗತ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಈ ಯೋಜನೆ ಮುಂದುವರಿಸುವುದರಿಂದ ತೆರಿಗೆದಾರರ ಹಣ ವ್ಯರ್ಥವಾಗುತ್ತದೆ. ಈ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ವರ್ತೂರು ನಾಗರಿಕ ಹಿತ ರಕ್ಷಣಾ ವೇದಿಕೆ ಆಗ್ರಹಿಸಿದೆ. ಅಲ್ಲದೆ ಈ ಫ್ಲೈಓವರ್ ಅನ್ನು ಕೆರೆಯ ಬಫರ್ ವಲಯದೊಳಗೆ ಯೋಜಿಸಲಾಗಿದೆ. ಇದು ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ನೇರ ಉಲ್ಲಂಘನೆಯಾಗಿದೆ. ಈ ಸೂಕ್ಷ್ಮ ವಲಯದಲ್ಲಿ ಯಾವುದೇ ನಿರ್ಮಾಣವು ಪರಿಸರ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸುತ್ತದೆ ಎಂದೂ ದೂರಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications