₹5,000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅಭಿವೃದ್ಧಿ; ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯ!

ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮಾತನಾಡಿದ್ದಾರೆ. ಕ್ರೀಡಾ ಕ್ಷೇತ್ರ ಹಾಗೂ ಕ್ರೀಡಾಪುಟುಗಳಿಗೆ ಸಂಬಂಧಿಸಿದಂತೆ ಜಿ ಪರಮೇಶ್ವರ್ ಅವರು ಹೇಳಿದ್ದೇನು ಹಾಗೂ ₹5,000 ಕೋಟಿ ವೆಚ್ಚದಲ್ಲಿ ಕಂಠೀರವ ಕ್ರೀಡಾಂಗಣವನ್ನು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.

ರೋಗ ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ಫಿಸಿಯೋಥೆರಪಿ ಕ್ರೀಡಾಭಿವೃದ್ಧಿಯ ಅವಿಭಾಜ್ಯ ಅಂಗವಾಗಬೇಕು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಫಿಸಿಯೋಥೆರಪಿ ಇಂದು ಆಧುನಿಕ ಆರೋಗ್ಯ ಸೇವೆ ಮತ್ತು ಕ್ರೀಡಾ ವಿಜ್ಞಾನದ ಅವಿಭಾಜ್ಯ ಅಂಗವಾಗಿ ಬೆಳೆದಿದ್ದು, ರೋಗ ತಡೆಗಟ್ಟುವ ಆರೋಗ್ಯ ಸೇವೆಯಲ್ಲಿ ಫಿಸಿಯೋಥೆರಪಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ, ಕ್ರೀಡಾ ಕ್ಷೇತ್ರದಲ್ಲಿ ಇದರ ಬಳಕೆಯನ್ನು ಮತ್ತಷ್ಟು ವಿಸ್ತರಿಸಿ, ಕರ್ನಾಟಕವನ್ನು ಫಿಸಿಯೋಥೆರಪಿಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ಅಗತ್ಯವಿದೆ ಎಂದು ಜಿ. ಪರಮೇಶ್ವರ್ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಐಟಿಸಿ ಗಾರ್ಡೇನಿಯಾದಲ್ಲಿ ಭಾನುವಾರ ನಡೆದ ಬೆಂಗಳೂರು ಫಿಸಿಯೋಥೆರಪಿಸ್ಟ್ಸ್ ನೆಟ್‌ವರ್ಕ್ (BPN) ಕೊಲೋಕ್ವಿಯಂ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

5 000

ಫಿಸಿಯೋಥೆರಪಿಯ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು

ಬೆಂಗಳೂರು ಫಿಸಿಯೋಥೆರಪಿಸ್ಟ್ಸ್ ನೆಟ್‌ವರ್ಕ್ ಸತತ 16ನೇ ವರ್ಷ ಈ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಇಂತಹ ವೃತ್ತಿಪರ ಸಮ್ಮೇಳನಗಳು ಕೇವಲ ತಜ್ಞರನ್ನು ಒಂದೆಡೆ ಸೇರಿಸುವ ವೇದಿಕೆಗಳಲ್ಲ; ಬದಲಾಗಿ ವೃತ್ತಿಯ ಮುಂದಿರುವ ಸವಾಲುಗಳ ಕುರಿತು ಚರ್ಚಿಸಿ, ಜ್ಞಾನ ವಿನಿಮಯ ನಡೆಸಿ, ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಪರಿಹಾರಗಳನ್ನು ಕಂಡುಕೊಳ್ಳುವ ಮಹತ್ವದ ವೇದಿಕೆಗಳಾಗಿವೆ ಎಂದು ಹೇಳಿದರು. ಸಮ್ಮೇಳನದಲ್ಲಿ ಚರ್ಚೆಗೆ ಆಯ್ಕೆ ಮಾಡಿರುವ ವಿಷಯಗಳು ಯುವ ಫಿಸಿಯೋಥೆರಪಿಸ್ಟ್‌ಗಳಿಗೆ ಅತ್ಯಂತ ಉಪಯುಕ್ತವಾಗಿದ್ದು, ಆರೋಗ್ಯ ಕ್ಷೇತ್ರದ ಬದಲಾಗುತ್ತಿರುವ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ರೋಗಿಗಳಿಗೆ ಇನ್ನಷ್ಟು ಪರಿಣಾಮಕಾರಿ ಸೇವೆ ನೀಡಲು ನೆರವಾಗಲಿವೆ ಎಂದರು.

ಫಿಸಿಯೋಥೆರಪಿಯ ಬೆಳವಣಿಗೆಯ ಕುರಿತು ಮಾತನಾಡಿದ ಡಾ. ಪರಮೇಶ್ವರ ಅವರು, ದೈಹಿಕ ಚಿಕಿತ್ಸೆಯ ವಿವಿಧ ವಿಧಾನಗಳು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿದ್ದರೂ, ವಿಶೇಷವಾಗಿ ವಿಶ್ವಯುದ್ಧಗಳ ನಂತರ ಗಾಯಗೊಂಡ ಸೈನಿಕರ ಪುನರ್ವಸತಿಯ ಅಗತ್ಯತೆಯೊಂದಿಗೆ ಫಿಸಿಯೋಥೆರಪಿ ವೈಜ್ಞಾನಿಕ ಚಿಕಿತ್ಸಾ ಪದ್ಧತಿಯಾಗಿ ಬೆಳೆಯಿತು ಎಂದು ಹೇಳಿದರು. ಇಂದು ಇದು ಜಾಗತಿಕ ಆರೋಗ್ಯ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು, ರೋಗಿಗಳ ಪುನರ್ವಸತಿ, ಶೀಘ್ರ ಚೇತರಿಕೆ ಹಾಗೂ ಉತ್ತಮ ಜೀವನಮಟ್ಟ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಮುಂದುವರಿದು ದೇಶದಲ್ಲಿ ವೈದ್ಯಕೀಯ ಹಾಗೂ ಫಿಸಿಯೋಥೆರಪಿ ಶಿಕ್ಷಣದ ವ್ಯಾಪ್ತಿ ವಿಸ್ತರಿಸಿರುವುದನ್ನು ಉಲ್ಲೇಖಿಸಿದ ಅವರು, ಪ್ರತಿವರ್ಷ ಸಾವಿರಾರು ವೈದ್ಯರು ಮತ್ತು ಫಿಸಿಯೋಥೆರಪಿ ವೃತ್ತಿಪರರು ಹೊರಬರುತ್ತಿದ್ದರೂ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವುದು ಇನ್ನೂ ದೊಡ್ಡ ಸವಾಲಾಗಿದೆ. ಫಿಸಿಯೋಥೆರಪಿಯನ್ನು ಕೇವಲ ನೋವು ಅಥವಾ ಗಾಯವಾದಾಗ ಪಡೆಯುವ ಚಿಕಿತ್ಸೆಯಾಗಿ ಪರಿಗಣಿಸದೆ, ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. ಆರೋಗ್ಯವಂತ ಸಮಾಜವು ದೇಶದ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ತಮ್ಮ ಕ್ರೀಡಾ ಜೀವನದ ಅನುಭವವನ್ನು ಹಂಚಿಕೊಂಡ ಡಾ. ಪರಮೇಶ್ವರ, ತಾವು ಅಥ್ಲೀಟ್ ಆಗಿದ್ದ ಸಂದರ್ಭದಲ್ಲಿ ಸ್ನಾಯು ಸೆಳೆತ ಹಾಗೂ ಗಾಯಗಳಿಂದಾಗಿ ಅನೇಕ ಬಾರಿ ಪ್ರಮುಖ ಸ್ಪರ್ಧೆಗಳನ್ನು ತಪ್ಪಿಸಿಕೊಳ್ಳಬೇಕಾಗುತ್ತಿತ್ತು ಎಂದು ಸ್ಮರಿಸಿದರು. ಆ ಸಮಯದಲ್ಲಿ ತರಬೇತಿ ಪಡೆದ ಫಿಸಿಯೋಥೆರಪಿಸ್ಟ್‌ಗಳ ಮಾರ್ಗದರ್ಶನ ಲಭ್ಯವಿದ್ದರೆ ತಮ್ಮಂತಹ ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿತ್ತು ಎಂದರು.

ಕ್ರೀಡಾ ಕ್ಷೇತ್ರದಲ್ಲಿ ಫಿಸಿಯೋಥೆರಪಿಯ ಪಾತ್ರವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದ ಅವರು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ತರಬೇತುದಾರರ ಜೊತೆಗೆ ಫಿಸಿಯೋಥೆರಪಿಸ್ಟ್‌ಗಳ ಸೇವೆಯೂ ದೊರೆಯುವಂತೆ ಮಾಡುವ ಕುರಿತು ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಹೇಳಿದರು. ಇದರಿಂದ ಕ್ರೀಡಾಪಟುಗಳ ಸಾಧನೆ ಹಾಗೂ ನೋವು ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಕ್ರೀಡಾ ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆಗೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು. ಸುಮಾರು ₹5,000 ಕೋಟಿ ವೆಚ್ಚದಲ್ಲಿ ಕಂಠೀರವ ಕ್ರೀಡಾಂಗಣವನ್ನು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆಯ ಭಾಗವಾಗಿ ಫಿಸಿಯೋಥೆರಪಿ ಹಾಗೂ ಕ್ರೀಡಾ ವಿಜ್ಞಾನಕ್ಕೆ ಪ್ರತ್ಯೇಕ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಇದರಿಂದ ಬೆಂಗಳೂರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ವೈದ್ಯಕೀಯ ಮತ್ತು ಫಿಸಿಯೋಥೆರಪಿಯ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+