5 ಸ್ಟಾರ್ 3 ಸ್ಟಾರ್ ಆಯ್ತು ಈಗ ಬೆಂಗಳೂರು ಸೇರಿ ಕರ್ನಾಟಕದ ಪಿಜಿಗಳಿಗೂ ದೊಡ್ಡ ಶಾಕ್ ಕೊಟ್ಟ ಆರೋಗ್ಯ ಇಲಾಖೆ!

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಆರೋಗ್ಯ ಇಲಾಖೆಯು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ, ವಿವಿಧ ಅಡುಗೆಗೆ ಬಳಸುವ ಆಹಾರ ಪದಾರ್ಥಗಳ ಪರಿಶೀಲನೆಯನ್ನು ನಡೆಸಿತ್ತು. ಈ ದಿಢೀರ್ ಕಾರ್ಯಾಚರಣೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ 5 ಸ್ಟಾರ್ ಹಾಗೂ 3 ಸ್ಟಾರ್ ಹೋಟೆಲ್‌ಗಳು ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬಂದಿತ್ತು.

ಬೆಂಗಳೂರು ನಗರದಲ್ಲಿ 5 ಸ್ಟಾರ್ ಹೋಟೆಲ್‌ಗಳಿಂದ ಹಿಡಿದು ಇಂದಿರಾ ಕ್ಯಾಂಟೀನ್‌ಗಳವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಬೆಂಗಳೂರಿನ ಪಿಜಿಗಳಿಗೂ ಶಾಕ್ ಕೊಡುವುದಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪಿಜಿಗಳಲ್ಲಿ ಪೂರೈಕೆ ಮಾಡುವ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಇವೆ. ಇದೀಗ ಬೆಂಗಳೂರಿನ ಪಿಜಿಗಳಿಗೆ ಬಿಸಿ ಮುಟ್ಟಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

5

ಇನ್ನು ಈಗಾಗಲೇ ಕಳೆದ ಆರು ತಿಂಗಳಿಗೂ ಹೆಚ್ಚು ಅವಧಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಹ ಬೆಂಗಳೂರಿನ ಪಿಜಿಗಳ ಮೇಲೆ ಸ್ವಚ್ಛತೆ ಪರಿಶೀಲನೆ ಮಾಡುವುದಕ್ಕೆ ಕಾರ್ಯಾಚರಣೆ ಮುಂದುವರಿಸಿದೆ. ಇದೀಗ ಆರೋಗ್ಯ ಇಲಾಖೆಯು ಈಚೆಗೆ ನಡೆಸಿದ ಆಹಾರ ಸುರಕ್ಷತಾ ಪದ್ಧತಿ ಪರಿಶೀಲನೆ ಜನರಲ್ಲಿ ಕಳವಳಕ್ಕೂ ಕಾರಣವಾಗಿದೆ. ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಈ ಮಾದರಿಯ ಆಹಾರ ಬಳಸಿದರೆ ಹೇಗೆ ಎಂದು ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಇಲಾಖೆಯು ಪರಿಶೀಲನೆಯನ್ನು ಮುಂದುವರಿಸಿದೆ.

ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪಿಜಿಗಳ ಪರಿಶೀಲನೆ ಮಾಡುವುದಕ್ಕೂ ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತ ಶ್ರೀನಿವಾಸ್ ಕೆ ಅವರು, ನಗರದಾದ್ಯಂತ ತಿನಿಸುಗಳಲ್ಲಿ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಹೊಸದಾಗಿ 89 ಅಧಿಕಾರಿಗಳನ್ನು ನೇಮಿಸಲು ನಮಗೆ ಅನುಮೋದನೆ ಸಿಕ್ಕಿದೆ. ನಿಯಮಗಳ ಪ್ರಕಾರ, ನಾವು ಬಿಎಸ್ಸಿ (ರಸಾಯನಶಾಸ್ತ್ರ) ಪದವಿಗಳನ್ನು ಹೊಂದಿರುವ ಅಧಿಕಾರಿಗಳನ್ನು ನೇಮಿಸಬೇಕು, ಆದರೆ ನಮಗೆ ಹಾಗೆ ಮಾಡಲು ಸಾಧ್ಯವಾಗಿಲ್ಲ. ನಮಗೆ ಈಗ ವಿನಾಯಿತಿ ಸಿಕ್ಕಿದೆ, ಆದರೆ ಹುದ್ದೆಗಳನ್ನು ಭರ್ತಿ ಮಾಡಲು ನಾವು ಪರೀಕ್ಷೆಯನ್ನು ನಡೆಸುತ್ತೇವೆ. ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಆಹಾರ ಸುರಕ್ಷತಾ ವಿಭಾಗಕ್ಕೆ ನಿರ್ದಿಷ್ಟವಾಗಿ ಜನರನ್ನು ನೇಮಿಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ DH ವರದಿ ಮಾಡಿದೆ.

ಮುಂದಿನ ಹಂತದಲ್ಲಿ ಪಿಜಿಗಳ ಪರಿಶೀಲನೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಆರೋಗ್ಯ ಇಲಾಖೆಯು ಪ್ರತಿಷ್ಠಿತ ಹೋಟೆಲ್‌ಗಳಿಂದ ಹಿಡಿದು ಸಾಮಾನ್ಯ ಹೋಟೆಲ್‌ಗಳ ವರೆಗೆ ಈಗಾಗಲೇ ಪರಿಶೀಲನೆ ನಡೆಸಿದೆ. ಇದೀಗ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಪಿಜಿಗಳಲ್ಲಿನ ಆಹಾರದ ಗುಣಮಟ್ಟದ ಬಗ್ಗೆಯೂ ಮುಂದಿನ ದಿನಗಳಲ್ಲಿ ಪರಿಶೀಲನೆ ಮಾಡಲಾಗುವುದು. ಪಿಜಿಗಳಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಬಗ್ಗೆಯೂ ಗಮನ ನೀಡಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಚೆಗೆ ನಡೆದ ಕಾರ್ಯಾಚರಣೆಯು ಹಲವು ಕಾರಣಗಳಿಗೆ ಗಮನ ಸೆಳೆದಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮೊದಲ ಹಂತದಲ್ಲಿಯೇ ಫೈವ್‌ ಸ್ಟಾರ್ ಹಾಗೂ ತ್ರಿಸ್ಟಾರ್ ಹೋಟೆಲ್‌ಗಳ ಆಹಾರ ಪರಿಶೀಲನೆ ಮಾಡಿದ್ದರು. ಅಲ್ಲದೆ ಇಂದಿರಾ ಕ್ಯಾಂಟೀನ್‌ಗಳಲ್ಲೂ ಆಹಾರದ ಗುಣಮಟ್ಟ ಹಾಗೂ ಆಹಾರ ಪದಾರ್ಥಗಳು ಎಷ್ಟು ದಿನಗಳ ವರೆಗೆ ಬಳಸಲು ಯೋಗ್ಯವಾಗಿದೆ ಎನ್ನುವುದು ಸೇರಿದಂತೆ ಹಲವು ವಿಷಯಗಳನ್ನು ಪರಿಶೀಲನೆ ಮಾಡಲಾಗಿತ್ತು. ಇದೀಗ ಆಹಾರ ನಿಯಮ ಉಲ್ಲಂಘನೆ ಮಾಡಿರುವ ಹೋಟೆಲ್‌ಗಳಿಗೆ ನೋಟಿಸ್ ಸಹ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+