ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಸೆ.17ರಂದು 5 ಲಕ್ಷ ಮಂದಿಗೆ ಕೊರೊನಾ ಲಸಿಕೆ ಗುರಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ಕೊರೊನಾ ಸೋಂಕಿನ ವಿರುದ್ಧ 'ಮೆಗಾ ಲಸಿಕಾ ಅಭಿಯಾನ'ಕ್ಕೆ ಬಿಬಿಎಂಪಿ ಸಜ್ಜಾಗಿದ್ದು, ಶುಕ್ರವಾರ ನಗರದಲ್ಲಿ ಸುಮಾರು ಐದು ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕುವ ಗುರಿ ಹೊಂದಿದೆ. ಈ ಗುರಿ ಸಾಧಿಸಲು ಬಿಬಿಎಂಪಿ ಅಧಿಕಾರಿಗಳು ಯೋಜನೆಯನ್ನು ಹಾಕಿಕೊಂಡಿದ್ದಾರೆ.

ಪ್ರತಿ ವಾರ್ಡ್‌ನಲ್ಲಿಯೂ ಹತ್ತು ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲು ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ದುಪ್ಪಟ್ಟು ಏರಿಕೆಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ದುಪ್ಪಟ್ಟು ಏರಿಕೆ

ನಗರದಲ್ಲಿ ವ್ಯಾಪಕ ಲಸಿಕಾ ಕೇಂದ್ರಗಳ ಸ್ಥಾಪನೆಯೊಂದಿಗೆ, ಬೆಂಗಳೂರಿನಲ್ಲಿ ಒಟ್ಟಾರೆ ಲಸಿಕಾ ಕೇಂದ್ರಗಳ ಸಂಖ್ಯೆ 2178ಕ್ಕೆ ತಲುಪಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಲಸಿಕೆ ನೀಡುತ್ತಿದ್ದು, ಲಸಿಕೆ ನೀಡುವ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೂ ಲಸಿಕೆ ನೀಡಲಾಗುತ್ತಿದೆ. ಇತರೆ ಲಸಿಕಾ ಕೇಂದ್ರಗಳು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಕೆಲಸ ನಿರ್ವಹಿಸಲಿವೆ.

5 Lakh People To Be Vaccinated Against Covid-19 On Sep 17

ಇದಲ್ಲದೇ, ಪ್ರತಿ ವಾರ್ಡ್‌ನಲ್ಲಿ ಅಸ್ವಸ್ಥರಿಗೆ ಹಾಗೂ ಅಂಗವಿಕಲರಿಗೆ ಲಸಿಕೆ ನೀಡಲು ಬಿಎಲ್‌ಎಸ್‌ ಆಂಬುಲೆನ್ಸ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಶುಕ್ರವಾರ ಈ ಲಸಿಕಾ ಅಭಿಯಾನಕ್ಕೆ ನರ್ಸಿಂಗ್ ಕಾಲೇಜುಗಳು ಹಾಗೂ ಖಾಸಗಿ ಆಸ್ಪತ್ರೆಗಳ ತಂಡಗಳನ್ನು ಬಳಸಿಕೊಳ್ಳಲಾಗುವುದಾಗಿ ತಿಳಿಸಿದೆ.

ಬಿಬಿಎಂಪಿಯಿಂದ ಗರ್ಭಿಣಿ, ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನ ವಿಸ್ತರಣೆಬಿಬಿಎಂಪಿಯಿಂದ ಗರ್ಭಿಣಿ, ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನ ವಿಸ್ತರಣೆ

'ಖಾಸಗಿ ಆಸ್ಪತ್ರೆಗಳೊಂದಿಗೆ ನಾವು ಕೊರೊನಾ ಲಸಿಕೆ ಗುರಿ ತಲುಪಲು ಸಮನ್ವಯ ಸಾಧಿಸುತ್ತಿದ್ದೇವೆ. ಕೆಲವು ಖಾಸಗಿ ಆಸ್ಪತ್ರೆಗಳು ತಾವೇ ಅಭಿಯಾನ ನಡೆಸುತ್ತಿವೆ. ಇನ್ನು ಕೆಲವು ಆಸ್ಪತ್ರೆಗಳು ಲಸಿಕೆ ನೀಡಲು ತಂಡಗಳನ್ನು ಕಳುಹಿಸಲಿವೆ' ಎಂದು ರಣದೀಪ್ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಅಂಗಳದಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್ ಡಿ ತಿಳಿಸಿದ್ದಾರೆ.

5 Lakh People To Be Vaccinated Against Covid-19 On Sep 17

ಗರ್ಭಿಣಿಯರಿಗೆ ಕೊರೊನಾ ಲಸಿಕೆ:
ನಗರದಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ. ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ನಗರದ 20 ಹೆರಿಗೆ ಆಸ್ಪತ್ರೆಗಳಲ್ಲಿಯೇ ಪಾಲಿಕೆ ವತಿಯಿಂದ ವಾರದಲ್ಲಿ ಮೂರು ದಿನಗಳ ಕಾಲ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಲಸಿಕೆ ನೀಡಲು ಚಿಂತನೆ ನಡೆಸಲಾಗಿದೆ.

12 ಸಾರ್ವಜನಿಕ ಆರೋಗ್ಯ ಕೇಂದ್ರಗಳು, 6 ರೆಫರಲ್ ಆಸ್ಪತ್ರೆಗಳು, 3 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಯುಪಿಎಚ್‌ಸಿ), ಒಂದು ಸಮುದಾಯ ಆರೋಗ್ಯ ಕೇಂದ್ರ, ವಾಣಿ ವಿಲಾಸ ಆಸ್ಪತ್ರೆ ಮತ್ತು ಗೋಶಾ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಲಸಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ:
ಬೆಂಗಳೂರಿನಲ್ಲಿ ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ದಾಖಲಾದ ಹೊಸ ಕೊರೊನಾ ಪ್ರಕರಣಗಳಲ್ಲಿ 100% ಏರಿಕೆಯಾಗಿದೆ. ಬುಧವಾರ 462 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1242332ಕ್ಕೆ ಏರಿಕೆಯಾಗಿದೆ. 5 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 16065ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಈವರೆಗೂ ಸೋಂಕು ತಗುಲಿದ 1218938 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪರೀಕ್ಷಾ ದರ ಹೆಚ್ಚಳವಾಗಿದ್ದು ಕೂಡ ಬುಧವಾರದ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಬ್ಬದ ಕಾರಣದಿಂದಾಗಿ ಸೋಂಕು ಹರಡುವಿಕೆ ಹೆಚ್ಚಾಯಿತೇ ಎಂಬುದು ತಿಳಿದಿಲ್ಲ. ಹೀಗಾಗಿ ವಾರದ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳುವುದು ಸೂಕ್ತ. ಇದರಿಂದ ಕೊರೊನಾ ಸ್ಥಿತಿಗತಿಯಲ್ಲಿನ ಬದಲಾವಣೆಗಳನ್ನು ಗಮನಿಸಬಹುದಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದಾರೆ.

Recommended Video

ತಾಲಿಬಾನ್ ಮೇಲೆ ದಾಳಿ ಮಾಡಲು ಭಾರತದ ಸೇನೆಯ ಸಹಾಯ ಕೋರಿದ ಅಮೆರಿಕ | Oneindia Kannada

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2964083ಕ್ಕೆ ಏರಿಕೆಯಾಗಿದೆ. ಒಟ್ಟು 2910626 ಸೋಂಕಿತರು ಗುಣಮುಖರಾಗಿದ್ದು. 15892 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Gearing up for the 'Mega Vaccination Drive' in Bengaluru, BBMP is aiming to inoculate about five lakh people on sep 17
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X