ಬಿ - ಖಾತಾದಿಂದ ಎ ಖಾತಾ ಪರಿವರ್ತನೆಗೆ 5% ಶುಲ್ಕ: ಕಾಂಗ್ರೆಸ್‌ನಲ್ಲೇ ವಿರೋಧ! ವೈರಲ್ ವಿಡಿಯೋ

ಕರ್ನಾಟಕ ಸರ್ಕಾರವು ಬಿ - ಖಾತಾದಿಂದ ಎ - ಖಾತಾ ಪರಿವರ್ತನೆಗೆ ಅವಕಾಶ ನೀಡಿದೆ. ಆದರೆ, ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಸಿಕೊಳ್ಳುವುದಕ್ಕೆ ಲಕ್ಷಾಂತರ ರೂಪಾಯಿ ಕಟ್ಟಬೇಕು ಎಂದು ಹೇಳುತ್ತಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಾರ್ವಜನಿಕ ವಲಯದಿಂದ ಮಾತ್ರವಲ್ಲ ಕಾಂಗ್ರೆಸ್‌ನ ಶಾಸಕರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕ ಸರ್ಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅವಕಾಶ ನೀಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಸಿಕೊಳ್ಳುವುದಕ್ಕೆ ಗೈಡ್‌ಲೈನ್ಸ್‌ ವ್ಯಾಲ್ಯೂ (Guidelines Value) ನಿಗದಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್‌ನ ಕೆಲವು ಶಾಸಕರೇ ಬಿ ಖಾತಾ ಪರಿವರ್ತನೆಯಲ್ಲಿ ಹಣ ನಿಗದಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸುವುದಕ್ಕೆ ಪ್ರಾರಂಭ ಮಾಡಿದ್ದಾರೆ.

5 Percent fee for conversion from B-Khata to A-Khata Opposition within Congress Viral video

ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಕಾಂಗ್ರೆಸ್ ಶಾಸಕರ ವಿಡಿಯೋ ಹಂಚಿಕೊಂಡಿರುವ ಜೆಡಿಎಸ್, ಟ್ರಂಕ್ ತುಂಬಿಸಿಕೊಳ್ಳಲು ಹೊರಟಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರೇ ಕೇಳಿಸ್ಕೋಳ್ಳಿ. ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ 5% ವಸೂಲಿಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ವರ್ಷದ ಹಿಂದಷ್ಟೇ ಸರ್ಕಾರ ಗೈಡ್ ಲೈನ್ಸ್ ವಾಲ್ಯೂ ಹೆಚ್ಚಳ ಮಾಡಿದ್ದು, ಈಗ ಖಾತೆ ಪರಿವರ್ತನೆಗೆ 5% ವಸೂಲಿ ಜನ ವಿರೋಧಿ ನಡೆಯಲ್ಲದೇ ಮತ್ತೇನು! ಸಣ್ಣ ಸೈಟ್ ಹೊಂದಿರುವವರು 5 ಲಕ್ಷ ರೂ. ಕಟ್ಟಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದೆ. ಮುಂದುವರಿದು ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಹೆಸರಲ್ಲಿ ಬಡವರ ಸುಲಿಗೆ ಮಾಡುವ ಕಾರ್ಯಕ್ರಮ ಎಂದು ಕಾಂಗ್ರೆಸ್ಸಿಗರೇ ಛೀಮಾರಿ ಹಾಕುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ 5% ಹಗಲು ದರೋಡೆ ಕೈ ಬಿಟ್ಟು, ಅದಷ್ಟು ಕಡಿಮೆ ಮಾಡಿ ಬಡ ಜನರ ಬದುಕಿಗೆ ಆಸರೆಯಾಗಿ ಎಂದು ಜೆಡಿಎಸ್ ತಿವಿದಿದೆ.

ಇನ್ನು ಮತ್ತೊಂದು ಟ್ವೀಟ್‌ನಲ್ಲಿ ಹೌದಪ್ಪ ಹೌದು.. ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರೇ, ಹಚ್‌.ಡಿ. ಕುಮಾರಸ್ವಾಮಿ ಅವರು ಖಾಲಿ ಟ್ರಂಕ್ ಅನ್ನೋದು ದಿಟವೇ. ಅವರದು ಖಾಲಿ ಕೈ, ತುಂಬಿದ ಹೃದಯ. ನಿಮ್ಮದು ಹಾಗಲ್ಲವಲ್ಲ, ಹೃದಯದ ತುಂಬಾ ಕಾರ್ಕೋಟಕ ವಿಷ. ಕಂಡೋರ ಹಣವನ್ನು ಮತ್ತು ಬಡವರು, ದೀನದಲಿತರು, ದುರ್ಬಲರ ಭೂಮಿಯನ್ನು ಹೆದರಿಸಿ ಬೆದರಿಸಿ ಕಿತ್ತುಕೊಂಡು ತುಂಬಿಸಿಕೊಂಡ ಪಾಪದ ಟ್ರಂಕು! ಈ ಸತ್ಯ ನಿಮಗಷ್ಟೇ ಅಲ್ಲ, ಇಡೀ ನಾಡಿಗೆ, ದೇಶಕ್ಕೇ ತಿಳಿದ ಸತ್ಯ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಮಿಸ್ಟರ್ #ಲೂಟೇಶಿ ? ಎಂದು ಟ್ವೀಟ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+