ಕೂಡಲೇ ಶೇ.50ರಷ್ಟು ಬಾಕಿ ಬಿಲ್ ನೀಡಬೇಕು, ಇಲ್ಲಾಂದ್ರೆ ರಾಜ್ಯಾದ್ಯಂತ ಹೋರಾಟ- ಕೆಂಪಣ್ಣ
ಬೆಂಗಳೂರು, ಅಕ್ಟೋಬರ್ 13: ಬಾಕಿ ಬಿಲ್ ಪಾವತಿ ಮಾಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮಾನವಿ ಮಾಡಿದ್ದೇವೆ. ಆದರೆ ಇದುವರೆಗೆ ಪಾವತಿ ಮಾಡಿಲ್ಲ. ಬಾಕಿ ಬಿಲ್ ಪಾವತಿಗೆ ಜಿಎಸ್‌ಟಿ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಹೊಸ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಗೆ ಹಲವು ಭಾಗ್ಯಗಳನ್ನೂ ಕರುಣಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 20 ಸಾವಿರ ಕೋಟಿ ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಬಾಕಿ ಬರಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತನಿಖೆ ಹೆಸರಲ್ಲಿ ಬಾಕಿ ಹಣ ತಡೆಹಿಡಿಯಲಾಗಿದೆ. ಸರ್ಕಾರ ತನಿಖೆ ಅಂತ ಮೂರು ವರ್ಷ ಅವಧಿ ಹೇಳಿದೆ. ಮೂರು ವರ್ಷ ಅಂದ್ರೆ ಹೇಗೆ..? ಎಂದು ಪ್ರಶ್ನಿಸಿದ್ದಾರೆ.

ಕೆಲವು ಇಲಾಖೆಯಲ್ಲಿ ಶೇ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಇತ್ತ ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡ್ತಿದ್ದಾರೆ. ಈ ಬಗ್ಗೆ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಇಂಜಿನಿಯರ್‌ಗಳು ಹೇಳುತ್ತಿದ್ದಾರೆ. ಕೆಲ ಗುತ್ತಿಗೆದಾರರು ಶಿಫಾರಸು ಪತ್ರ ತಂದರೆ ಕಮಿಷನ್ ಪಡೆದು ರಾತ್ರೋರಾತ್ರಿ ಚೆಕ್ ನೀಡುತ್ತಿದಾರೆ ಎಂದು ಆರೋಪಿಸಿದರು.
ಗುತ್ತಿಗೆದಾರರು ಸಾಲ ಸೋಲ ಮಾಡಿ ಖಾಸಗಿ ಲೇವಾದೇವಿಗಳ ಬಳಿ ಅಸ್ತಿ ಪತ್ರ ಅಡವಿಟ್ಟು ಕಾಮಗಾರಿ ಮಾಡಿದ್ದಾರೆ. ಅದೆಷ್ಟೋ ಗುತ್ತಿಗೆದಾರರು ಸಾಲಗಾರರ ಕಾಟಕ್ಕೆ ಊರು ಬಿಟ್ಟಿದ್ದಾರೆ. ಸರ್ಕಾರ ಒಂದು ತಿಂಗಳಲ್ಲಿ ಬಾಕಿ ಮೊತ್ತ ಶೇಕಡಾ 50ರಷ್ಟು ಬಿಡುಗಡೆ ಮಾಡಬೇಕು. ಇಲ್ಲವಾದರೆ ಸಂಪೂರ್ಣ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮೂರು ವರ್ಷ ಬೇಕು ಅಂದ್ರೆ ಆಗಲ್ಲ. ನಾಲ್ಕೈದು ಬಾರಿ ಸಿಎಂಗೆ ಮನವಿ ಮಾಡಲಾಗಿದೆ. ಅರ್ಧದಷ್ಟು ಹಣ ಕೂಡಲೇ ಪಾವತಿ ಮಾಡಬೇಕು. ಈಗಾಗಲೇ ನಾವು ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ನಿರ್ಮಾಣವಾಗಿದೆ. ನಮ್ಮ ಪೇಮೆಂಟ್ ಮಾಡಿ , ಆಮೇಲೆ ನಿಮಗೆ ಏನ್ ಮಾಡಬೇಕೋ ಮಾಡಿಕೊಳ್ಳಿ. ಪ್ರತಿ ಜಿಲ್ಲೆಯಲ್ಲೂ ಸಮ್ಯಸೆ ಹೆಚ್ಚಾಗಿದೆ. ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಬ್ಯಾಂಕ್‌ನವರು ಎಲ್ಲಾ ಸೀಜ್ ಮಾಡುತ್ತಿದ್ದಾರೆ ಎಂದು ತಮ್ಮ ಸಂಕಷ್ಟ ಹೇಳಿಕೊಂಡರು.
5ತಿಂಗಳಿಂದ ಸರ್ಕಾರ ಬಾಕಿ ಬಿಲ್ ನೀಡಿಲ್ಲ. 4 ಬಾರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಒಬ್ಬರು ಈಗಾಗಲೇ ವಿಷ ತೆಗೆದುಕೊಂಡಿದ್ದಾರೆ. ಕೂಡಲೇ ಶೇ. 50ರಷ್ಟು ಬಾಕಿ ಬಿಲ್ ನೀಡಬೇಕು. ಸೀನಿಯಾರಿಟಿ ಆಧಾರದಲ್ಲಿ ಬಾಕಿ ಬಿಲ್ ಪಾವತಿ ಮಾಡಬೇಕು. ನಾವು ಕಷ್ಟದಲ್ಲಿದ್ದೇವೆ. ರೈತರಾದ್ರೂ ಪರವಾಗಿಲ್ಲ, ನಮ್ಮ ಪರಿಸ್ಥಿತಿ ಅಯೋಮಯವಾಗಿದೆ. ನಮ್ಮ ಗುತ್ತಿಗೆದಾರರ ಬ್ಯಾಂಕ್ ಅಕೌಂಟ್‌ಗಳು ಈಗಾಗಲೇ ಫ್ರೀಜ್ ಆಗಿದೆ ಎಂದು ಹೇಳಿದರು.
ಬಿಲ್ ಆಗಿಲ್ಲವೆಂದರೆ ಹೋರಾಟ ಅನಿವಾರ್ಯವಾಗಿದೆ. ಇಲ್ಲಿ ಯಾವುದೇ ಪಕ್ಷ ಇಲ್ಲ. ಕೆಂಪಣ್ಣ ಎಲ್ಲಿದ್ದಿಯಾ ಎಂದು ಜಿಟಿ ದೇವೇಗೌಡರು ಹೇಳಿದ್ದಾರೆ. ಮೂರು ವರ್ಷದಿಂದ ನೀವು ಎಲ್ಲಿದ್ದಿರಿ?. ಇಷ್ಟೆಲ್ಲಾ ಹೋರಾಟ ಮಾಡೋವಾಗ ನೀವೆಲ್ಲಿದ್ದಿರಿ. ಕಾಂಗ್ರೆಸ್ ಅವರು ತಪ್ಪು ಮಾಡಿದ್ರೂ ಹೋರಾಟ ಮಾಡುತ್ತೇವೆ. ಸಿಎಂ ಒಂದು ತಿಂಗಳೊಳಗೆ ಸಭೆ ಮಾಡಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಗುತ್ತಿಗೆದಾರರ ಸಂಘ ಉಪಾಧ್ಯಕ್ಷರ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಕೆಂಪಣ್ಣ, ಅವರು ಕೇವಲ ಗುತ್ತಿಗೆದಾರಿಕೆ ಮಾತ್ರ ಅಲ್ಲ ಬೇರೆ ಮೂಲ ಇರಬಹುದು. ಕ್ರಷರ್ ಇದೆ, ವ್ಯವಸಾಯ ಮಾಡುತ್ತಿದ್ದರು ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications