ಬೆಂಗಳೂರು ನಗರದಲ್ಲಿ ಬರಲಿವೆ 50 ಹೊಸ ಇಂದಿರಾ ಕ್ಯಾಂಟೀನ್
ಬೆಂಗಳೂರು, ಜೂನ್ 04; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸರ್ಕಾರ ಮುನ್ನಡೆಸುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಈಗ ಈ ಯೋಜನೆಯನ್ನು ಮತ್ತೆ ಕಾರ್ಯಗತಗೊಳಿಸುವ ಚರ್ಚೆ ಆರಂಭವಾಗಿದೆ.
ಬೆಂಗಳೂರು ನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದಿರಾ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳುತ್ತದೆ. ನಗರದಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ಸಿದ್ಧತೆ ನಡೆದಿದೆ. ಈಗ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿ ಇರುವುದರಿಂದ ಕ್ಯಾಂಟೀನ್ ನಿರ್ವಹಣೆ ಮಾಡಲು ಅನುದಾನದ ಕೊರತೆ ಆಗುವುದಿಲ್ಲ ಎಂಬುದು ಲೆಕ್ಕಾಚಾರವಾಗಿದೆ.

2013ರ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. 2017ರಲ್ಲಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಯೋಜನೆಗೆ ಚಾಲನೆ ನೀಡಿದ್ದರು. ಆದರೆ ಬಳಿಕ ಇಂದಿರಾ ಕ್ಯಾಂಟೀನ್ ಯೋಜನೆಗೆ ಸರಿಯಾದ ಅನುದಾನ ಸಿಕ್ಕಿಲ್ಲ. ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಕ್ಯಾಂಟೀನ್‌ಗೆ ಬೀಗ ಜಡಿಯುವ ಪರಿಸ್ಥಿತಿ ನಿರ್ಮಾಣಗೊಂಡಿತು.
ವರದಿ ನೀಡಲು ಸೂಚನೆ; ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್‌ಗಳ ಸ್ಥಿತಿಗತಿಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರದಿ ಆಧರಿಸಿ ಅವರು ಕ್ಯಾಂಟೀನ್‌ಗಳನ್ನು ಹೇಗೆ ಅಭಿವೃದ್ಧಿ ಮಾಡಬಹುದು ಎಂದು ಯೋಜನೆ ರೂಪಿಸಲಿದ್ದಾರೆ. ಇದರ ನಡುವೆಯೇ ಬೆಂಗಳೂರಿನಲ್ಲಿ 50 ಹೊಸ ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಮುಂದಾಗಿದೆ.
ಬೆಂಗಳೂರು ನಗರದಲ್ಲಿ ವಾರ್ಡ್‌ಗೊಂದು ಇಂದಿರಾ ಕ್ಯಾಂಟೀನ್ ಎಂಬ ಘೋಷಣೆಯಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮೊಬೈಲ್ ಕ್ಯಾಂಟೀನ್‌ಗಳಿವೆ. ಈಗ ಮತ್ತೆ ಹೊಸ 50 ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಸಿದ್ದತೆ ನಡೆಸುತ್ತಿದೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಹೀಗೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಹೊಸ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ ಎನ್ನುವ ಮಾಹಿತಿ ಇದೆ.

2019ರ ತನಕ ಇಂದಿರಾ ಕ್ಯಾಂಟೀನ್‌ಗಳು ಯಶಸ್ವಿಯಾಗಿ ನಡೆದವು. ಬಳಿಕ ಆಹಾರದ ಗುಣಮಟ್ಟ, ಹೆಸರು ಬದಲಾವಣೆ, ಗ್ರಾಹಕರಿಗೆ ನೀಡುವ ಆಹಾರದದಲ್ಲಿ ಕಳ್ಳಲೆಕ್ಕ ಹೀಗೆ ವಿವಿಧ ವಿವಾದಗಳು ಕೇಳಿ ಬಂದವು. ಕ್ರಮೇಣ ಯೋಜನೆಯ ಜನಪ್ರಿಯತೆ ಕಡಿಮೆಯಾಗುತ್ತಾ ಬಂತು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ಯೋಜನೆ ಸ್ಥಗಿತಗೊಳಿಸಬಾರದು ಎಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿತ್ತು.
2017-18ರಲ್ಲಿ ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಸರ್ಕಾರ 100 ಕೋಟಿ, 2018-19ರಲ್ಲಿ ಮೈತ್ರಿ ಸರ್ಕಾರ 145 ಕೋಟಿ ಅನುದಾನ ನೀಡಿತ್ತು. ಆದರೆ ಬಳಿಕ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ ಎಂಬುದು ಆರೋಪವಾಗಿದೆ. 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಅಟಲ್ ಆಹಾರ ಕೇಂದ್ರ ತೆರೆಯುತ್ತೇವೆ ಎಂದು ಭರವಸೆ ಕೊಟ್ಟಿತ್ತು. ಆದರೆ ಪಕ್ಷ ಅಧಿಕಾರಕ್ಕೆ ಬರಲಿಲ್ಲ.
198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯ ವ್ಯಾಪ್ತಿ ಈಗ 243 ವಾರ್ಡ್‌ಗಳಿಗೆ ಏರಿಕೆಯಾಗುತ್ತಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ 50 ಹೊಸ ಇಂದಿರಾ ಕ್ಯಾಂಟೀನ್ ತೆರೆಯುವುದು ಬಿಬಿಎಂಪಿಯ ಯೋಜನೆಯಾಗಿದೆ. ಕ್ಯಾಂಟೀನ್‌ನಲ್ಲಿ ಆಹಾರದ ಮೆನು ಬದಲಾವಣೆ ಮಾಡಿ ರಾಗಿ ಮುದ್ದೆ, ಜೋಳದ ರೊಟ್ಟಿಯನ್ನು ಸಹ ನೀಡಲು ಕಾಂಗ್ರೆಸ್ ಸರ್ಕಾರ ಪ್ರಸ್ತಾವನೆ ಸಿದ್ಧಗೊಳಿಸಿದೆ.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್ ಪುನಶ್ಚೇತನ ಮಾಡಲಿದ್ದೇವೆ ಎಂದು ಭರವಸೆ ನೀಡಿತ್ತು. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಆಗ ಇಂದಿರಾ ಕ್ಯಾಂಟೀನ್‌ಗೆ ಅನುದಾನ ಘೋಷಣೆ ಮಾಡುವ ನಿರೀಕ್ಷೆ ಇದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ











Click it and Unblock the Notifications