DK Shivakumar: ಬೆಂಗಳೂರಿಗೆ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್: ಜನರಿಗೆ 3 ವರ್ಷ ಈ ಸಮಸ್ಯೆ ಫಿಕ್ಸ್ ?
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಏನೆಲ್ಲಾ ಆಗಲಿದೆ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಮೀಸಲಿರಿಸಲಾಗಿದೆ ಎನ್ನುವ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಆದರೆ ಇದರಿಂದ ಬೆಂಗಳೂರಿಗರಿಗೆ ಮುಂದಿನ ಮೂರು ವರ್ಷಗಳ ವರೆಗೆ ಭಾರೀ ಸಮಸ್ಯೆ ಆಗಲಿದೆ. ಏನಿದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೀಡಿರುವ ಅಪ್ಡೇಟ್ಸ್ ಹಾಗೂ ಇದರಿಂದ ಬೆಂಗಳೂರಿಗರಿಗೆ ಹೇಗೆಲ್ಲಾ ಸಮಸ್ಯೆ ಆಗಲಿದೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನ ಸಂಚಾರ ಸುವ್ಯವಸ್ಥೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮುಂದಿನ ಸುಮಾರು 3 ವರ್ಷದ ಒಳಗಾಗಿ ಬರೋಬ್ಬರಿ 1700 ಕೋಟಿ ವೆಚ್ಚದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 500 ಕಿ.ಮೀ. ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

1. ಬೆಂಗಳೂರಿನಲ್ಲಿ 1,700 ಕೋಟಿ ರೂಪಾಯಿ ವೆಚ್ಚದಲ್ಲಿ 145 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿ.
2. ಜನಸ್ನೇಹಿ ಪಾದಚಾರಿ ವ್ಯವಸ್ಥೆಯೊಂದಿಗೆ ವೈಟ್‌ಟಾಪಿಂಗ್ ಅಳವಡಿಸಿ, ಸಮಗ್ರವಾಗಿ ರಸ್ತೆಗಳ ಅಭಿವೃದ್ಧಿ.
3. ಇನ್ನು ಮುಂದಿನ ಮೂರು ವರ್ಷಗಳಲ್ಲಿ ಅಂದಾಜು 500 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್‌ಟಾಪಿಂಗ್ ಅಳವಡಿಸುವುದಕ್ಕೆ ನಿರ್ಧಾರ ಎಂದು ಡಿಸಿಎಂ ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿಗೆ 1.50 ಲಕ್ಷ ಕೋಟಿ ರೂಪಾಯಿ
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಅನುದಾನ ಮೀಸಲಿರಿಸಿರುವುದಾಗಿಯೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದು ನಮ್ಮ ಆದ್ಯತೆ ಎಂದಿದ್ದಾರೆ. ಬೆಂಗಳೂರು ಟ್ರಾಫಿಕ್ ಜಾಮ್ ಕಂಟ್ರೋಲ್ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಬರೋಬ್ಬರಿ 1.50 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿರಿಸಿರುವುದಾಗಿ ಹೇಳಿದ್ದಾರೆ.
ಬೆಂಗಳೂರಿಗರಿಗೆ 3 ವರ್ಷ ತಪ್ಪದ ಸಂಕಷ್ಟ!
ಬೆಂಗಳೂರಿನಲ್ಲಿ ಈಗಾಗಲೇ ವಿವಿಧ ಪ್ರದೇಶಗಳಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಇದೀಗ ಮುಂದಿನ ಮೂರು ವರ್ಷದ ಅವಧಿಗೆ ಬರೋಬ್ಬರಿ 500 ಕಿ.ಮೀ ಉದ್ದ ರಸ್ತೆಗಳಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ನಡೆಸುವುದಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ವೈಟ್‌ಟಾಪಿಂಗ್‌ನಿಂದ ಟ್ರಾಫಿಕ್ ಜಾಮ್ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಇದೆ. ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ರಸ್ತೆ ಅಗಲೀಕರಣ ಸಾಧ್ಯವಿಲ್ಲ. ಇರುವ ಕಿರಿದಾದ ದಾರಿಗಳಲ್ಲಿ ವೈಟ್‌ಟಾಪಿಂಗ್‌ನಿಂದ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗಲಿದ್ದು. ವೈಟ್‌ಟಾಪಿಂಗ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳು ತೆಗೆದುಕೊಳ್ಳದೆ ಇರುವುದರಿಂದ ವಾಯು ಗುಣಮಟ್ಟಕ್ಕೆ ಪೆಟ್ಟು ಬೀಳಲಿದ್ದು, ವಾಯುಮಾಲಿನ್ಯ ಇನ್ನಷ್ಟು ಹೆಚ್ಚಳವಾಗುವ ಆತಂಕವೂ ಶುರುವಾಗಿದೆ.
ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವು ಇದೀಗ ಉತ್ತಮದಿಂದ ಸಾಧಾರಣ ಹಂತಕ್ಕೆ ತಲುಪಿದೆ. ಎಕ್ಯೂಐ 68 ದಾಖಲಾಗಿದ್ದು, ಇದಕ್ಕೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಕಾಮಗಾರಿಗಳು ನಡೆಯುವಾಗ ಧೂಳು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳದೆ ಇರುವುದೂ ಕಾರಣವಾಗಿದೆ.












Click it and Unblock the Notifications