ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕರಿಗೆ ವ್ಯಾಕ್ಸಿನ್

|
Google Oneindia Kannada News

ಬೆಂಗಳೂರು, ಜು. 09: "ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಮತ್ತಿತರೆ ಸಿಬ್ಬಂದಿಗೆ ಕೋವಿಡ್‌ ಲಸಿಕೀಕರಣ ವೇಗವಾಗಿ ಸಾಗುತ್ತಿದ್ದು, ಗುರುವಾರದ (ಜೂನ್‌ 8) ಹೊತ್ತಿಗೆ ಶೇಕಡಾ 51.1 ಮಂದಿಗೆ ವ್ಯಾಕ್ಸಿನ್‌ ಕೊಡಲಾಗಿದೆ" ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಡಿಸಿಎಂ ಡಾ.ಸಿ.ಎನ್. ‌ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡಿರುವ ಅವರು, "ಬಿಬಿಎಂಪಿಯ ಒಟ್ಟು 8 ವಲಯಗಳಲ್ಲಿನ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 59179 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 31147 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಶೇಕಡಾ 52.63 ಗುರಿ ತಲುಪಲಾಗಿದೆ. ಹಾಗೆಯೇ, 3076 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದು, ಈ ಪೈಕಿ 2518 ಸಿಬ್ಬಂದಿಗೆ ಲಸಿಕೆ ನೀಡಿ ಶೇಕಡಾ 81.86 ಗುರಿ ತಲುಪಲಾಗಿದೆ" ಎಂದಿದ್ದಾರೆ.

 51.12% of Students And Staff Vaccinated in Bengaluru Govt Degree Colleges in BBMP limits

Recommended Video

ಸಲುಗೆ ಕೊಟ್ಟಿದ್ದು ಜಾಸ್ತಿ ಆಯ್ತಾ ಎಂದು ಅಭಿಮಾನಿ ತಲೆಗೆ ಹೊಡೆದ ಡಿಕೆಶಿ | Oneindia Kannada

"ಎಂಟೂ ವಲಯಗಳಲ್ಲಿ ವಿದ್ಯಾರ್ಥಿಗಳ ಲಸಿಕೀಕರಣ ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ಸಾಗಿದ್ದು ಆದಷ್ಟು ಬೇಗ ಲಸಿಕೀಕರಣ ಮುಗಿಸಲಾಗುವುದು ಎಂದಿರುವ ಡಿಸಿಎಂ, ಈವರೆಗೂ ಲಸಿಕೆ ಪಡೆಯದ ವಿದ್ಯಾರ್ಥಿಗಳು ತಪ್ಪದೇ ತಮ್ಮ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ.

English summary
The Department of College education has vaccinated 51.12% of students and staff in government degree colleges, DyCM & State Covid task force head, Dr. C.N. Ashwatha Narayana, stated on Friday. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X