ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ 56 ಮಂದಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು,ಫೆಬ್ರವರಿ 16: ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ 56 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದುಬಂದಿದೆ.

ನಿನ್ನೆಯಷ್ಟೇ ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ 31 ಮಂದಿ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದೆ. ಇದೀಗ ನಗರದ ಬಿಳೇಕಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ 56 ಮಂದಿಗೆ ಸೋಂಕು ತಗುಲಿದೆ.

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನ 31 ಮಂದಿಗೆ ಕೊರೊನಾ ಸೋಂಕು ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನ 31 ಮಂದಿಗೆ ಕೊರೊನಾ ಸೋಂಕು

ಅಲ್ಲಿ 1500 ಮಂದಿ ವಾಸಿಸುತ್ತಿದ್ದಾರೆ, 513 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಪಾರ್ಟಿಯೊಂದರಲ್ಲಿ 45ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

56 Residents Of An Apartment In Bengaluru Test Positive For Covid-19

ಸೋಂಕಿಗೆ ತುತ್ತಾದವರೆಲ್ಲರೂ ಕಡಿಮೆ ವಯಸ್ಸಿನವರಾಗಿದ್ದಾರೆ, ಹಾಗೆಯೇ ಯಾರೂ ಕೂಡ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ. ಸೋಂಕು ಯಾರಿಂದ ತಗುಲಿದೆ ಎನ್ನುವ ಕುರಿತು ಪರೀಕ್ಷೆ ನಡೆಸಲಾಗುತ್ತಿದೆ.

ಸೋಂಕು ತಗುಲಿರುವವರಲ್ಲಿ ಯಾರಿಗೂ ಯಾವುದೇ ಲಕ್ಷಣಗಳಿಲ್ಲ, ಹೀಗಾಗಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಈಗ 5855 ಸಕ್ರಿಯ ಪ್ರಕರಣಗಳಿವೆ, ಒಟ್ಟು 9,27,150 ಪ್ರಕರಣಗಳಿವೆ.

ಬೆಂಗಳೂರಿನ ಒಂದೇ ಅಪಾರ್ಟ್‌ಮೆಂಟ್‌ನ 31 ಮಂದಿಗೆ ಕೊರೊನಾ ಸೋಂಕು ತಗುಲಿದೆ.ಬೊಮ್ಮನಹಳ್ಳಿ ಪ್ರದೇಶದ ಅಪಾರ್ಟ್‌ಮೆಂಟ್ ಒಂದರಲ್ಲಿ 31 ಮಂದಿಗೆ ಸೋಂಕು ತಗುಲಿದ್ದು ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

ಆ ಅಪಾರ್ಟ್‌ಮೆಂಟ್‌ನಲ್ಲಿ 475 ಫ್ಲ್ಯಾಟ್‌ಗಳಿದ್ದು, 2500ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ.ಅವರೊಂದಿಗೆ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

English summary
In a shocking news, 56 residents of an apartment complex in Bengaluru's Bilekahalli have tested positive for COVID-19. According to a Deccan Herald report, the complex has around 1,500 residents of which 513 have so far been tested for the infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X