ಈ ಬಾರಿ ಆನ್ಲೈನಲ್ಲಿ ದಕ್ಷಿಣ ಭಾರತದ ಅತಿದೊಡ್ಡ ಗಣೇಶ ಉತ್ಸವ
ಬೆಂಗಳೂರು, ಅಗಸ್ಟ್ 21: ದಕ್ಷಿಣ ಭಾರತದ ಅತಿದೊಡ್ಡ ಗಣೇಶ ಉತ್ಸವ ಎನಿಸಿರುವ ಬೆಂಗಳೂರು ಗಣೇಶ ಉತ್ಸವ (ಬಿಜಿಯು)ವನ್ನು ಈ ಬಾರಿ ಸುರಕ್ಷತಾ ಮುನ್ನೆಚ್ಚರಿಕೆಗಳ ಮಾನದಂಡಗಳಲ್ಲಿ ಆಚರಿಸಲಾಗುತ್ತಿದೆ. ಬಹುನಿರೀಕ್ಷಿತ 58ನೇ ಆವೃತ್ತಿಯ ಈ ಉತ್ಸವವು ಆ.22ರಿಂದ ಸೆ.1ರವರೆಗೆ ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ವರ್ಚುವಲ್ ಲೈವ್‌ನಲ್ಲಿಯೇ ಜರುಗಲಿದೆ.
Recommended Video
ಬಸವನಗುಡಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿರುವ ಗಣೇಶ ಮಂಟಪದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ದೈನಂದಿನ ಪೂಜೆಯನ್ನೂ ಕೂಡ ವರ್ಚುವಲ್ ಆಗಿ ತೋರಿಸಲಾಗುತ್ತದೆ.
58ನೇ ಉತ್ಸವಕ್ಕಾಗಿ ವೇದಿಕೆಯಲ್ಲಿ ಪ್ರಸಿದ್ಧ ಸಂಗೀತಗಾರರು ಮತ್ತು ಕಲಾವಿದರು ಒಟ್ಟು ಗೂಡಲಿದ್ದಾರೆ. ಒಟ್ಟು 10 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಇದೇ ಸಭಾಂಗಣದಿಂದ ನೇರಪ್ರಸಾರವಾಗಲಿದೆ. ಕಲೆ ಮತ್ತು ಸಂಗೀತ ಪ್ರಿಯರ ಮನಗೆಲ್ಲುವಂತ ಕಾರ್ಯಕ್ರಮ ನೀಡಲು ವೇದಿಕೆ ಸಜ್ಜಾಗಿದೆ.

12 ತಾಸುಗಳ ನಿರಂತರ ಸುಗಮ ಸಂಗೀತ
ಖ್ಯಾತ ಗಾಯಕರಾದ ವಿಜಯ್‌ಪ್ರಕಾಶ್ ಅವರ ಲೈವ್ ಇನ್ ಕನ್ಸರ್ಟ್, ಪ್ರವೀಣ್ ಡಿ. ನೇತೃತ್ವದಲ್ಲಿ ರಾಜ್ಯದ ಗಾಯಕರನ್ನು ಒಳಗೊಂಡ 12 ತಾಸುಗಳ ನಿರಂತರ ಸುಗಮ ಸಂಗೀತ, ರಘು ದೀಕ್ಷಿತ್ ಅವರ ಫೋಕ್ ರಾಕ್ ಮ್ಯೂಸಿಕಲ್ ಕನ್ಸರ್ಟ್ ,ಪ್ರವೀಣ್ ಗೋಡ್ಖಿಂಡಿಯವರ ಸಂಗೀತ ಕಛೇರಿ ಕಾರ್ಯಕ್ರಮಗಳು ಸಂಗೀತ ಪ್ರಿಯರ ಮನಸೂರೆಗೊಳ್ಳಲಿದೆ.

58 ವರ್ಷಗಳ ಇತಿಹಾಸ ಹೊಂದಿರುವ ಉತ್ಸವ
''58 ವರ್ಷಗಳಲ್ಲಿ ನಾವು ಸಾಂಸ್ಕೃತಿಕವಾಗಿ, ಆಧ್ಯಾತ್ಮಿಕವಾಗಿ ಉತ್ಸವವನ್ನು ಉತ್ಸಾಹದಿಂದ ನಡೆಸಿಕೊಂಡು ಬಂದಿದ್ದೇವೆ. ಬೆಂಗಳೂರು ಜನರ ಸುರಕ್ಷತೆ ಹಾಗೂ ಆರೋಗ್ಯವನ್ನೂ ಗಮನದಲ್ಲಿಟ್ಟುಕೊಂಡು ಈ ಬಾರಿ ವರ್ಚುವಲ್ ರೂಪದಲ್ಲಿಉತ್ಸವವನ್ನು ನಡೆಸಲು ತೀರ್ಮಾನಿಸಿದ್ದೇವೆ'' ಎಂದು ಬೆಂಗಳೂರು ಗಣೇಶ ಉತ್ಸವ (ಬಿಜಿಯು) ತಿಳಿಸಿದೆ.

ವ್ಯವಸ್ಥಾಪಕ ಟ್ರಸ್ಟಿ ಎಸ್.ಎಂ. ನಂದೀಶ್
''ಹಬ್ಬದ ಉತ್ಸಾಹವನ್ನು ಜೀವಂತವಾಗಿರಿಸುವುದಕ್ಕಾಗಿ ವರ್ಚುವಲ್ ಲೈವ್ ಅನ್ನು ಆಯ್ಕೆ ಮಾಡಿ ಕೊಳ್ಳುವ ನಿರ್ಧಾರವನ್ನು ತೆಗೆದುಕೊಂಡೆವು. ಎಲ್ಲ ಸವಾಲುಗಳ ನಡುವೆಯೂ, ಸಂಗೀತಗಾರರು ಮತ್ತು ಕಲಾವಿದರು ಪ್ರದರ್ಶನ ನೀಡಲಿದ್ದಾರೆ'' ಎಂದು ಬಿಜಿಯು ವ್ಯವಸ್ಥಾಪಕ ಟ್ರಸ್ಟಿ ಎಸ್.ಎಂ. ನಂದೀಶ್ ಹೇಳಿದರು.

11 ದಿನಗಳ ಕಾಲ ಮಂಟಪದಲ್ಲಿ ಪೂಜೆ
ಎಲ್ಲಾ ಸಾಂಪ್ರದಾಯಿಕ ಆಚರಣೆಗಳೊಂದಿಗೆ, ಗಣೇಶನನ್ನು 11 ದಿನಗಳ ಕಾಲ ಮಂಟಪದಲ್ಲಿ ಪೂಜಿಸಲಾಗುತ್ತಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ನೀಡಲಾಗುತ್ತಿದೆ ಹಾಗೂ ಮಾಸ್ಕ್ ಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications