ಬೆಂಗಳೂರಿನಲ್ಲಿ 59 ಅಂತಸ್ತಿನ ಟ್ವಿನ್‌ ಟವರ್‌ ನಿರ್ಮಾಣ, ಏನಿದರ ವಿಶೇಷತೆ ?

ಬೆಂಗಳೂರಿನಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೆಜೆಸ್ಟಿಕ್‌ ಸಮೀಪದಲ್ಲೇ ಬೃಹತ್‌ ಯೋಜನೆಯೊಂದನ್ನು ಅನುಷ್ಠಾನ ಮಾಡುವ ಬಗ್ಗೆ ಕಳೆದ ಒಂದು ದಶಕದಿಂದಲೂ ಭರ್ಜರಿ ಚರ್ಚೆ ನಡೆದಿದೆ. ಆದರೆ, ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಚರ್ಚೆಗಳು ನಡೆದಿರಲಿಲ್ಲ. ಇದೀಗ ಬೆಂಗಳೂರಿನ ಹೃದಯ ಭಾಗ ಅಂತಲೇ ಫೇಮಸ್‌ ಆಗಿರುವ ಮೆಜೆಸ್ಟಿಕ್‌ ಸಮೀಪದ ಆನಂದರಾವ್ ಸರ್ಕಲ್‌ನ ಬಳಿ ದೊಡ್ಡ ಟ್ವಿನ್‌ ಟವರ್‌ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಏನಿದು ಯೋಜನೆ ಇದು ಅನುಷ್ಠಾನ ಆಗುವುದರಿಂದ ಆಗುವ ಲಾಭವೇನು ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು ಬೆಳದಂತೆ ಬೆಂಗಳೂರಿನಲ್ಲಿ ಬೃಹತ್‌ ಯೋಜನೆಗಳನ್ನು ಅನುಷ್ಠಾನ ಮಾಡುವುದು ಮುಂದುವರಿದಿದೆ. ಈಗಾಗಲೇ ಬೆಂಗಳೂರಿನಲ್ಲಿ ಟ್ವಿನ್‌ ಟನಲ್‌ (ಸುರಂಗ ಮಾರ್ಗ) ಯೋಜನೆಯ ಬಗ್ಗೆ ಭಾರೀ ಚರ್ಚೆ ನಡೆದಿದೆ. ಇದರ ನಡುವೆ ಬೆಂಗಳೂರಿನಲ್ಲಿ ಬೃಹತ್‌ ಟವರ್‌ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಡಿಪಿಆರ್‌ ಸಹ ಸಿದ್ಧಪಡಿಸಿಕೊಳ್ಳಲಾಗಿದೆ. ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬೆಂಗಳೂರಿನ ಆನಂದರಾವ್‌ ಸರ್ಕಲ್‌ ಸಮೀಪದಲ್ಲಿ 59 ಅಂತಸ್ತಿನ ಬೃಹತ್‌ ಅವಳಿ ಗೋಪುರ ನಿರ್ಮಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಲಿದೆ ಎಂದೂ ಹೇಳಲಾಗಿದೆ.

59 Storey Twin Tower Building to Be Built in Bengaluru

ಉದ್ದೇಶವೇನು: ಬೆಂಗಳೂರಿನ ಹೃದಯಭಾಗವಾಗಿರುವ ಆನಂದ್ ರಾವ್‌ ಸರ್ಕಲ್‌ನಲ್ಲಿ ಬರೋಬ್ಬರಿ 59 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡುವುದಕ್ಕೆ ಉದ್ದೇಶಿಸಲಾಗಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿರುವ ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡದಲ್ಲಿವೆ. ಇದರಿಂದ ಸರ್ಕಾರವು ಪ್ರತಿ ತಿಂಗಳೂ ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬೃಹತ್‌ ಕಟ್ಟಡ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಇದೀಗ ಆನಂದ್‌ರಾವ್‌ ಸರ್ಕಲ್‌ ಸಮೀಪದಲ್ಲಿ ಬೃಹತ್ ಅವಳಿ ಗೋಪುರ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

ಆನಂದ್‌ ರಾವ್ ವೃತ್ತದ ಸಮೀಪದಲ್ಲಿ 8.30 ಎಕರೆ ಸರ್ಕಾರಿ ಜಾಗವಿದ್ದು, ಅದರಲ್ಲಿ 5.23 ಎಕರೆ ಜಾಗದಲ್ಲಿ ಬಹುಮಹಡಿ ಅವಳಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಇನ್ನು ಈ ಯೋಜನೆಯನ್ನು 2020ರಲ್ಲೇ ಕಾರ್ಯ ರೂಪಕ್ಕೆ ತರುವುದಕ್ಕೆ ಉದ್ದೇಶಿಸಲಾಗಿತ್ತು. ಈಗ ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ಲಿ. ಸಂಸ್ಥೆಯಿಂದ ನಿರ್ಮಾಣದ ವೆಚ್ಚ ಭರಿಸಿ ನಿರ್ಮಾಣ ಮಾಡುವುದಕ್ಕೆ ಪ್ಲಾನ್‌ ಮಾಡಿಕೊಳ್ಳಲಾಗಿದೆ. ಈ ಅವಳಿ ಕಟ್ಟಡವನ್ನು ಅಂದಾಜು 1,500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ.

59 Storey Twin Tower Building to Be Built in Bengaluru

ಈ ಕಟ್ಟಡದಿಂದ ಕೆಂಪೇಗೌಡ ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣ ಹಾಗೂ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣ ತಲುವುದಕ್ಕೆ ವಾಕ್ ನಿರ್ಮಿಸುವುದಕ್ಕೂ ಯೋಜನೆ ರೂಪಿಸಿಕೊಂಡಿರುವುದಾಗಿ ಹೇಳಲಾಗಿದೆ.

2020ರಲ್ಲೇ ಯೋಜನೆ: ಇನ್ನು 2020ರಲ್ಲೇ ಈ ಯೋಜನೆಯನ್ನು ಅನುಷ್ಠಾನ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಈ ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದು ಕಳೆದ ಐದು ವರ್ಷಗಳಿಂದಲೂ ಚರ್ಚೆಯ ಹಂತದಲ್ಲೇ ಇದೆ. ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿದ್ದು ಇದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಬಾಡಿಗೆ ಹೊರೆಯಾಗುತ್ತಿದೆ. ಅದನ್ನು ತಪ್ಪಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+