6 ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ: ಭೂಸ್ವಾಧೀನ ಸೇರಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ವಿಚಾರವು ಈ ವರ್ಷ ಚರ್ಚೆಯಾದ ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಒಂದು. ಇದರೊಂದಿಗೆ ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಯ ಬಗ್ಗೆಯೂ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಯಾವುದು ಆರು ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಸಿದ್ದರಾಮಯ್ಯ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭರ್ಜರಿ ಸಿದ್ಧತೆ ಪ್ರಾರಂಭಿಸಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ತಜ್ಞರ ತಂಡ ರಚನೆ, ಟೆಂಡರ್ ಆಹ್ವಾನ ಸೇರಿದಂತೆ ಪ್ರಮುಖ ಬೆಳವಣಿಗೆಗಳು ನಡೆದಿವೆ. ಇದರೊಂದಿಗೆ 6 ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೆಲವೊಂದು ನಿರ್ದಿಷ್ಟ ಸೂಚನೆಗಳನ್ನು ಸಹ ಕೊಡಲಾಗಿದೆ.

ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ
ಕರ್ನಾಟಕ ಸರ್ಕಾರವು ಪ್ರಮುಖ 6 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದೆ. ಅದರಲ್ಲಿ ಹಾಸನ ವಿಮಾನ ನಿಲ್ದಾಣ, ವಿಜಯಪುರ, ರಾಯಚೂರು, ಮೈಸೂರು, ಕಾರವಾರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳು ಸೇರಿವೆ. ಈ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವುದಕ್ಕೆ ಸೂಚನೆ ನೀಡಿದ್ದಾರೆ. ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು. ಈ ಸಭೆಯಲ್ಲಿ ವಿಮಾನ ನಿಲ್ದಾಣಗಳ ವಿಚಾರವೂ ಚರ್ಚರ ಆಗಿದೆ.
ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನವು ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂ ಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಂತ್ರಿಕ ಸಮಸ್ಯೆ ಪರಿಹರಿಸಲು ಸೂಚನೆ
ಕರ್ನಾಟಕದಲ್ಲಿ ಆರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆ ನಡೆದಿದೆ. ಕೆಲವು ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಅಥವಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ ಮತ್ತು ಮೈಸೂರು ವಿಮಾನ ನಿಲ್ದಾಣ: ಇನ್ನು ಹಾಸನ ವಿಮಾನ ನಿಲ್ದಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ವಿಳಂಬ ಮಾಡದೆ ತಕ್ಷಣವೇ ಭೂಸ್ವಾಧೀನ ಪರಿಹಾರವನ್ನು ವಿತರಿಸಲು ಸೂಚಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗಾಗಿ ಈಗಾಗಲೇ ರಾಜ್ಯ ಸರ್ಕಾರವು 319 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಭೂಸ್ವಾಧೀನಕ್ಕಾಗಿ ವೆಚ್ಚ ಮಾಡಿದೆ. ಅಲ್ಲದೇ ಕಾಮಗಾರಿಯನ್ನು ವೇಗಗೊಳಿಸಲು ಕೇಂದ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮನವಿ ಸಲ್ಲಿಸಲಾಗಿದೆ.
6 ವಿವಿಧ ವಿಮಾನ ನಿಲ್ದಾಣಗಳ ಪ್ರಗತಿ
ರಾಜ್ಯದ ಆರು ವಿಮಾನ ನಿಲ್ದಾಣಗಳ ಪ್ರಗತಿಯು ವಿವಿಧ ಹಂತಗಳಲ್ಲಿ ಇದೆ. ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪರಿಹಾರ ಪ್ರಕ್ರಿಯೆ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣವು 2026ರಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆ ಇದೆ. ರಾಯಚೂರು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾರವಾರ ನೌಕಾನೆಲೆ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಗತಿಯಲ್ಲಿದೆ. ಶಿವಮೊಗ್ಗ ಅಥವಾ ಇತರ ಪ್ರಾದೇಶಿಕ ನಿಲ್ದಾಣಗಳು ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆದಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ವಿಚಾರವೂ ಚರ್ಚೆ ಆಗುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕನಕಪುರ ರಸ್ತೆ ಅಥವಾ ಕುಣಿಗಲ್ ರಸ್ತೆ ಸಮೀಪದ ಸ್ಥಳಗಳನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications