ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 33ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಮೇ 14: ಕರ್ನಾಟಕದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದ್ದು, ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಆಂಧ್ರ ಪ್ರದೇಶದಿಂದ ಬಂದಿದ್ದ 60 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಬಂತು ಮೊದಲ ಪ್ರಯಾಣಿಕ ರೈಲು ದೆಹಲಿಯಿಂದ ಬೆಂಗಳೂರಿಗೆ ಬಂತು ಮೊದಲ ಪ್ರಯಾಣಿಕ ರೈಲು

ರೋಗಿ ನಂಬರ್ 796 ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು.

Corona Infected Person Dies At Victoria Hospital

ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಕೊರೊನಾದಿಂದ ಮತ್ತೊಬ್ಬರು ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ನಂತರ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಅನಂತಪುರ ಜಿಲ್ಲೆಯಿಂದ ಬಂದಿದ್ದರು. ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ವೃದ್ಧ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.

ತಕ್ಷಣ ವೃದ್ಧನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ನಂತರ ವೃದ್ಧನನ್ನು ಕೋವಿಡ್ ವಾರ್ಡಿನಲ್ಲಿ ಇರಿಸಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

English summary
Corona Infected Person Dies In Victoria Hospital Bengaluru. Corona death In Karnataka Rises To 33.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X