ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ಸೋಂಕಿತೆ ಸಾವು
ಬೆಂಗಳೂರು, ಏಪ್ರಿಲ್ 19: ಬೆಂಗಳೂರಿನಲ್ಲಿ ಆಮ್ಲಜನಕದ ಅಭಾವದಿಂದ 61 ವರ್ಷದ ಮಹಿಳೆ ಸಾವನ್ನಪ್ಪಿರುವ ಸಂಗತಿ ಸೋಮವಾರ ನಡೆದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಲಭ್ಯವಾಗದೇ ಮಹಿಳೆ ರಾತ್ರಿ 8.30ರ ಸಮಯದಲ್ಲಿ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ದಿನದ ಹಿಂದೆ ದಂಪತಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಇಬ್ಬರಿಗೂ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಕೂಡಲೇ ಬನಶಂಕರಿ ಬಳಿಯ ಖಾಸಗಿ ಆಸ್ಪತ್ರೆಗೆ ಇಬ್ಬರೂ ದಾಖಲಾಗಿದ್ದರು. ಆದರೆ ಇಂದು ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಮಹಿಳೆ ಮೃತಪಟ್ಟಿದ್ದಾರೆ.

ಇವರು ದಾಖಲಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿದ್ದು, ಬೇರೆ ಆಸ್ಪತ್ರೆಗೆ ದಾಖಲು ಮಾಡಿ ಎಂದು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯ ಹೆಲ್ಫ್ ಲೈನ್ ಗೆ ದಂಪತಿ ಸ್ನೇಹಿತರು ಕರೆ ಮಾಡಿದ್ದರು. ಅದಷ್ಟು ಬೇಗ ಬೆಡ್ ವ್ಯವಸ್ಥೆ ಮಾಡಿ ಎಂದು ಮೃತರ ಸಂಬಂಧಿಗಳು ಕೇಳಿಕೊಂಡಿದ್ದರು. ಆದರೆ ಬಿಯು ನಂಬರ್ ಇಲ್ಲದೇ ಆಸ್ಪತ್ರೆಗೆ ಸೇರಿಸಲು ಆಗಲ್ಲ ಎಂದು 108 ಸಿಬ್ಬಂದಿ ಅಸಡ್ಡೆ ತೋರಿದ್ದರು ಎಂದು ತಿಳಿದುಬಂದಿದೆ.
ನಾಲ್ಕು ದಿನದ ಹಿಂದೆಯೇ ಕೋವಿಡ್ ದೃಢಪಟ್ಟಿದ್ದರೂ ಇಲ್ಲಿವರೆಗೆ ಬಿಯು ನಂಬರ್ ಜನರೇಟ್ ಆಗಿಲ್ಲ. ಜೊತೆಗೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಹಾಗೂ ಆಮ್ಲಜನಕ ದೊರೆಯದಿರುವುದೇ ಮಹಿಳೆ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಸದ್ಯ ಅದೇ ಖಾಸಗಿ ಆಸ್ಪತ್ರೆಯಲ್ಲಿ ಮೃತರ ಪತಿಯೂ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೂ ಆಕ್ಸಿಜನ್ ಸಮಸ್ಯೆ ಶುರುವಾಗಿದೆ. ಇಷ್ಟಾದರೂ ಒಂದು ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಪರದಾಡುತ್ತಿದೆ.
Recommended Video
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications