• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಂ ಕೋವಿಡ್, ನಿಧಿಗೆ 64 ಲಕ್ಷ ರೂ. ದೇಣಿಗೆ!

|

ಬೆಂಗಳೂರು, ಜೂ. 11: ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಇಂದು ಒಟ್ಟು 64,07,974 ಗಳ ದೇಣಿಗೆಯ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವೀಕರಿಸಿದ್ದಾರೆ.

ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 50 ಲಕ್ಷ ರೂ.ಗಳು, ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ನೌಕರರ 3 ದಿನಗಳ ವೇತನ 10 ಲಕ್ಷ ರೂ.ಗಳು ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿವೃತ್ತ ಅಧಿಕಾರಿಗಳು ಮತ್ತು ನೌಕರರ ಒಂದು ದಿನದ ಪಿಂಚಣಿ 2,15,158 ರೂಗಳು ಹಾಗೂ ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿಗಳು ಮತ್ತು ನೌಕರರ ಒಂದು ದಿನದ ವೇತನ 1,92,816 ರೂ.ಗಳ ಚೆಕ್ಕನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಗಿದೆ.

ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
64 lakhs have been donated to Chief Minister COVID 19 Relief Fund in a single day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X