ಕೆಲಸ ಕೊಡಿಸುವುದಾಗಿ ನಂಬಿಸಿ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು, ಮಾರ್ಚ್ 6: ಕೆಲಸ ಕೊಡಿಸುವುದಾಗಿ ನಂಬಿಸಿ 64 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು ವೃದ್ಧೆಯ ಮೇಲೆ ಸೆಕ್ಯುರಿಟಿ ಗಾರ್ಡ್ ಸೇರಿದಂತೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಯಲಹಂಕದ ಪ್ರೇಮ್, ಭೀಮಲ್ ಹಾಗೂ ರಘುವನಹಳ್ಳಿಯ ಸೆಕ್ಯುರಿಟಿ ಗಾರ್ಡ್ ರಾಮ್ ಬಹದ್ದೂರ್ ದುಷ್ಕೃತ್ಯ ಎಸಗಿದ್ದು, ಎರಡು ದಿನಗಳ ಹಿಂದೆ ಹೊಸಕೋಟೆ ತಾಲೂಕು ಮೂಲದ ವೃದ್ಧೆಯನ್ನು ಕೆಲಸದ ನೆಪದಲ್ಲಿ ಕರೆ ತಂದು ಲೈಂಗಿಕ ಶೋಷಣೆ ನಡೆಸಿದ್ದಾರೆ.

64 year old woman Gang raped in Bengaluru

ಈ ಬಗ್ಗೆ ತಲಘಟ್ಟಪುರ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಬಳಿಕ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ರಾಮ್ ಬಹದ್ದೂರ್ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ ಕರೆದೊಯ್ದು,ಅಲ್ಲಿ ಕೊಠಡಿಯಲ್ಲಿ ಬಂಧಿಸಿಟ್ಟು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+