ಬೆಂಗಳೂರಿನ 65 ಎಕ್ರೆಯಲ್ಲಿ ಬೃಹತ್ ವೃಕ್ಷೋದ್ಯಾನ ನಿರ್ಮಾಣ, ಮಾರ್ಚ್‌ಗೆ ಗುಡ್‌ನ್ಯೂಸ್: ಎಂಬಿ ಪಾಟೀಲ್
ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ಈ ಹಿಂದಿದ್ದ ಸರ್ಕಾರ ಅಧೀನದ ಎನ್.ಜಿ.ಇ.ಎಫ್ ಕಾರ್ಖಾನೆಗೆ ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು. ಮಾರ್ಚ್ ತಿಂಗಳಲ್ಲಿ ಮೊದಲ ಹಂತವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಎನ್.ಜಿ.ಇ.ಎಫ್. ಆವರಣಕ್ಕೆ ಭೇಟಿ ನೀಡಿ ವೃಕ್ಷೋದ್ಯಾನ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಯೋಜನೆ ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಅವರು, ವೃಕ್ಷೋದ್ಯಾನವನ್ನು ಹಂತ 1, 1ಎ, 1ಬಿ ಮತ್ತು 2 ಹೀಗೆ ನಾಲ್ಕು ಹಂತಗಳಲ್ಲಿ, 37.75 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. 1ಎ ಹಂತದ ಕಾಮಗಾರಿ ಕೂಡ ಮುಂದಿನ 6 ತಿಂಗಳಲ್ಲಿ ಮುಗಿಯಲಿದೆ.

ಈ ಜಾಗದಲ್ಲಿ ಈಗಾಗಲೇ 8,500 ಬಗೆಬಗೆಯ ಮರಗಳಿವೆ. ಇವುಗಳ ವೈಜ್ಞಾನಿಕ ಹೆಸರನ್ನು ಈಗ ಪ್ರದರ್ಶಿಸಲಾಗಿದೆ. ಇವುಗಳ ಪೈಕಿ ಒಂದೇ ಒಂದು ಮರವನ್ನೂ ನಾವು ಕಡಿಯುವುದಿಲ್ಲ. ಆದರೆ ಇಲ್ಲಿರುವ ನೀಲಗಿರಿ ಜಾತಿಯ ಮರಗಳನ್ನು ಏನು ಮಾಡಬೇಕೆಂದು ವೈಜ್ಞಾನಿಕವಾಗಿ ಪರಿಶೀಲಿಸಿ, ತೀರ್ಮಾನಿಸಲಾಗುವುದು. ಹಂತ-1ರ ಕಾಮಗಾರಿಗಳಿಗೆ ಅಗತ್ಯವಿದ್ದ 11.50 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅಂಕಿ ಸಂಖ್ಯೆ ಸಹಿತ ಮಾಹಿತಿ ನೀಡಿದರು.
ಎನ್ ಜಿಇಎಫ್ ಆವರಣದಲ್ಲಿರುವ ಆಡಳಿತ ಕಚೇರಿ ಕಟ್ಟಡಗಳು, ಕೈಗಾರಿಕಾ ಶೆಡ್ ಗಳು ಕೂಡ ಸುಭದ್ರವಾಗಿವೆ. ಇವೆಲ್ಲವೂ ಗಟ್ಟಿ ಮುಟ್ಟಾಗಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಪರೀಕ್ಷಿಸಿ, ಹೇಳಿದ್ದಾರೆ. ಆದ್ದರಿಂದ ಈ ಕಟ್ಟಡಗಳಿಗೇ ಹೊಸ ರೂಪ ಕೊಟ್ಟು ಅಗತ್ಯಗಳನ್ನು ಪೂರೈಸಿಕೊಳ್ಳಲಾಗುವುದು. ಕಾಂಪೌಂಡಿನ ಹೊರಗೂ ಕಾರ್ಖಾನೆಗೆ ಸೇರಿದ 4.5 ಎಕರೆ ಜಾಗವಿದೆ. ಅಲ್ಲಿ 5 ರಿಂದ 7 ಸಾವಿರ ವಾಹನಗಳ ನಿಲುಗಡೆಗೆ ಬಹುಮಹಡಿ ಪಾರ್ಕಿಂಗ್ ಲಾಟ್ ನಿರ್ಮಿಸಲಾಗುವುದು ಎಂದರು.
ಇರುವ ಎರಡು ಎಲೆಕ್ಟ್ರಿಕ್ ಮೋಟಾರ್ ಶೆಡ್ ಗಳಲ್ಲಿ ಕನಿಷ್ಠ 15 ಸಾವಿರ ಆಸನ ವ್ಯವಸ್ಥೆ ಇರುವ ಎರಡು ಪ್ರತ್ಯೇಕ ಕನ್ವೆನ್ಶನ್ ಸೆಂಟರ್ ನಿರ್ಮಿಸಲಾಗುವುದು. ಇಲ್ಲಿ ಸಮಾವೇಶ, ಸಮಾರಂಭ, ವಾರ್ಷಿಕೋತ್ಸವ, ಸಮ್ಮೇಳನ, ವಿಚಾರ ಸಂಕಿರಣಗಳಂತಹ ಕಾರ್ಯಕ್ರಮ ನಡೆಸಬಹುದು. ಇದರ ಜೊತೆಗೆ 'ಇನ್ನೋವರ್ಸ್' ಹೆಸರಿನಲ್ಲಿ ನವೋದ್ಯಮಗಳಿಗೆ ಬೇಕಾದ ಪರಿಪೋಷಣಾ ಕೇಂದ್ರವನ್ನು ಸರ್ಕಾರ 'ಕಿಟ್ಸ್' ಸಂಸ್ಥೆಯ ವತಿಯಿಂದ ಸ್ಥಾಪಿಸಲಾಗುವುದು. ಇಲ್ಲಿ ನವೋದ್ಯಮ ವಲಯದವರು ಬಂದು ಕೆಲಸವನ್ನೂ ಮಾಡಬಹುದು. ಜೊತೆಗೆ ಐಟಿ-ಬಿಟಿ ಇಲಾಖೆಯು ಇಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 'ಟೆಕ್ನಾಲಜಿ ಇನ್ನೋವೇಶನ್ ಮ್ಯೂಸಿಯಂ'ಅನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಇಲ್ಲಿ ಜಾಗತಿಕ ಮಟ್ಟದ ಶಿಲ್ಪಕಲೋದ್ಯಾನ
ವೃಕ್ಷೋದ್ಯಾನದಲ್ಲಿ ಜಾಗತಿಕ ಮಟ್ಟದ ಶಿಲ್ಪಕಲೋದ್ಯಾನ, ಎನ್ ಜಿಇಎಫ್ ವಸ್ತು ಸಂಗ್ರಹಾಲಯ ಕೂಡ ಇರಲಿವೆ. ಈ ಆವರಣದಲ್ಲಿ ಯಾವುದೇ ರೀತಿಯ ಮಾಲ್ ನಿರ್ಮಿಸುವುದಿಲ್ಲ. ಜೊತೆಗೆ ವೈವಿಧ್ಯಮಯ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತ ಆ್ಯಂಪಿ ಥಿಯೇಟರ್ ಕಟ್ಟಲಾಗುವುದು. ಇದರಿಂದ ನಗರದ ಪೂರ್ವ ಭಾಗದ ಜನರಿಗೆ ಅನುಕೂಲವಾಗಲಿದೆ. ಇದು ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಗಿಂತ ಒಳ್ಳೆಯ ಹಸಿರು ತಾಣವಾಗಲಿದೆ. ಇಲ್ಲಿ ಪ್ರವೇಶದ್ವಾರಕ್ಕೆ ಬೇಕಾದ ಸ್ವಲ್ಪ ಜಾಗ ಮಾತ್ರ ನಮ್ಮ ಮೆಟ್ರೋ ಅಧೀನದಲ್ಲಿದೆ. ಈ ಸಂಬಂಧವಾಗಿ ಅವರೊಂದಿಗೆ ಮಾತನಾಡಿ, ಜಾಗವನ್ನು ಪಡೆದುಕೊಳ್ಳಲಾಗುವುದು ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ವೃಕ್ಷಥಾನ್ ನಡೆಸುವ ಮೂಲಕ, 10 ಕೋಟಿ ಗಿಡಮರಗಳನ್ನು ಬೆಳೆಸಲು ಮುಂದಾಗಿದ್ದೇವೆ. ಹಸಿರುಸಿರಿಯ ಬೆಲೆ ಏನೆಂದು ನನಗೆ ಗೊತ್ತು. ಎನ್ ಜಿಎಎಫ್ ಜಾಗದಲ್ಲಿರುವ ಒಂದೇ ಒಂದು ಮರವನ್ನೂ ನಾವು ಕಡಿಯುವುದಿಲ್ಲ. ಬದಲಿಗೆ ಅವುಗಳನ್ನು ಜತನದಿಂದ ಸಂರಕ್ಷಿಸಲಾಗುವುದು. ಇದನ್ನು ಒಂದು ಅಂತರರಾಷ್ಟ್ರೀಯ ತಾಣ ಮಾಡುವುದೇ ನನ್ನ ಗುರಿ ಎಂದು ಹೇಳಿದರು.
ವೃಕ್ಷೋದ್ಯಾನದ ವಿಶೇಷಗಳು ಏನು?
ಎನ್ ಜಿಇಎಫ್ ವೃಕ್ಷೋದ್ಯಾನವು ಹಂತ-1 ಪ್ರವೇಶ ದ್ವಾರದ ಪ್ಲಾಜಾ, ಎಲಿವೇಟೆಡ್ ವಾಕ್-ವೇ, ಸೈಕ್ಲಿಂಗ್ ಪಥ, ನೀರಿನ ಝರಿ/ಚಿಲುಮೆ/ಕಾರಂಜಿ, ಫುಡ್ ಕೋರ್ಟ್, ಮಕ್ಕಳು ಆಟವಾಡುವ ಜಾಗ, ಸಾಕುಪ್ರಾಣಿಗಳನ್ನು ಕರೆದುಕೊಂಡು ಬರುವ ಜಾಗ, ಶೌಚಾಲಯಗಳು ಮತ್ತು ಇನ್ನಿತರ ಮೂಲಸೌಕರ್ಯಗಳನ್ನು ಒಳಗೊಂಡಿದೆ.
ಫೇಸ್ 1-ಬಿ ಅಡಿಯಲ್ಲಿ 26.23 ಕೋಟಿ ರೂ. ವಿನಿಯೋಗಿಸಲು ಸರ್ಕಾರ ಸಜ್ಜಾಗಿದೆ. ಇದರ ಅಡಿಯಲ್ಲಿ ಮತ್ತಷ್ಟು ಎಲಿವೇಟೆಡ್-ವಾಕ್ ವೇಸ್, ವೀಕ್ಷಣಾ ಗೋಪುರ, ಮುಂಚಿನಿಂದಲೂ ಇರುವ ಆಡಳಿತ ವಿಭಾಗದ ನವೀಕರಣ, ಓಪನ್ ಆ್ಯಂಫಿ-ಥಿಯೇಟರ್ ಅಭಿವೃದ್ಧಿಗೊಳ್ಳಲಿವೆ. ಫೇಸ್-2ರಲ್ಲಿ ಎನ್ ಜಿಇಎಫ್ ಫ್ಯಾಕ್ಟರಿ ಇದ್ದಾಗ ಕಟ್ಟಿದ್ದ ಶೆಡ್ ಗಳನ್ನು ಸ್ಪೋರ್ಟ್ ಹಬ್, ಕಲೆ ಮತ್ತು ಸಂಸ್ಕೃತಿಗಳ ಕೇಂದ್ರ, ಸಮುದಾಯ ಭವನ ಮತ್ತು ಫುಡ್ ಕೋರ್ಟ್ ಇಷ್ಟನ್ನೂ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications