ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್‌ ರೋಗಿಗಳಿಗೆ ಶೇ.50 ಹಾಸಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ರಾಜ್ಯ ಸರ್ಕಾರದ ಆದೇಶ ಪಾಲಿಸದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ.

ರಾಜ್ಯ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ.

ಕರ್ನಾಟಕ; 23,558 ಹೊಸ ಕೋವಿಡ್ ಪ್ರಕರಣ ದಾಖಲುಕರ್ನಾಟಕ; 23,558 ಹೊಸ ಕೋವಿಡ್ ಪ್ರಕರಣ ದಾಖಲು

ಈ ಹಿನ್ನೆಲೆಯಲ್ಲಿ ಈ ವರೆಗೆ ಶೇ.50ರಷ್ಟು ಹಾಸಿಗೆ ಮೀಸಲಿಡದ ಫೋರ್ಟಿಸ್, ಅಪೋಲೋ, ಆಕ್ಸಿಸ್, ಎಸಿಇ ಸುಹಾಸ್, ಅಗಾಡಿ, ರಾಜಾಜಿನಗರದ ಅನನ್ಯಾ, ಅಥ್ರೇಯಾ, ಆರ್ಟಿಯಮ್, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿ, ಮತ್ತು ಬ್ಲಾಸಮ್ ಫರ್ಟಿಲಿಟಿ ಸೆಂಟರ್ ಆಸ್ಪತ್ರೆ ಸೇರಿದಂತೆ ಒಟ್ಟು 66 ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

 66 Hospitals Get Notice For Not Reserving Covid Beds

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಿದ್ದರೂ ಹಲವು ಖಾಸಗಿ ಆಸ್ಪತ್ರೆಗಳು ಹಾಸಿಗೆ ಮೀಸಲಿಟ್ಟಿಲ್ಲ. ಇನ್ನೂ ಕೆಲವು ಆಸ್ಪತ್ರೆಗಳು ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಹಂತ, ಹಂತವಾಗಿ ಕೋವಿಡ್ ಸೋಂಕಿತರಿಗಾಗಿ ಹಾಸಿಗೆ ಮೀಸಲಿಡುವುದಾಗಿ ಸಮಜಾಯಿಷಿ ನೀಡಿವೆ.

ಕರ್ನಾಟಕದಲ್ಲಿ 23,558 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 12,22,202ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 116 ಜನರು ಸಾವನ್ನಪ್ಪಿದ್ದಾರೆ.

ಆರೋಗ್ಯ ಇಲಾಖೆ ಬುಧವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 6,412 ಜನರು ಡಿಸ್ಚಾರ್ಜ್ ಆಗಿದ್ದಾರೆ. 904 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

English summary
With the Covid second wave raging, the State Government had ordered all private hospitals to reserve 50 per cent of their beds for Covid patients. Since many failed to comply with the order, BBMP Chief Commissioner Gaurav Gupta on Wednesday issued notices to 66 more hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X