ಬೆಂಗಳೂರು ಸಮೀಪ 4 ಹೊಸ ನಗರ: 7,000 ಕೋಟಿ ರೂ., ಈ ಜಾಗದ ಭೂಮಿಗೆ ಬಂಗಾರದ ಬೆಲೆ ! Bengaluru’s Real Estate
Bengaluru's Real Estate: ಬೆಂಗಳೂರು ಅಭಿವೃದ್ಧಿಯ ವೇಗದಲ್ಲಿ ಬೆಂಗಳೂರಿನಲ್ಲಿ ಬೃಹತ್ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ಇದೀಗ ಬೆಂಗಳೂರಿನ ಬೃಹತ್ ಯೋಜನೆಗಳಲ್ಲಿ ಒಂದಾಗಿರುವ ಕ್ವಾಂಟಮ್ ಸಿಟಿ ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ಬಂದಿದೆ. ಇದರ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವ ನಿರೀಕ್ಷೆ ಮೂಡಿದೆ. ಉದ್ದೇಶಿತ "ಕ್ವಾಂಟಮ್ ಸಿಟಿ" ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಸರಘಟ್ಟ ಬಳಿ ಭೂಮಿ ಮಂಜೂರಾಗಿದೆ.
ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಜಾರಿ ಮಾಡುತ್ತಿರುವ ಪ್ರಮುಖ ಯೋಜನೆಗಳಲ್ಲಿ "ಕ್ವಾಂಟಮ್ ಸಿಟಿ" ನಿರ್ಮಾಣವೂ ಒಂದಾಗಿದೆ. ಈ ಯೋಜನೆಯ ಮೂಲಕ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ 4 ಹೊಸ ನಗರಗಳು ತಲೆ ಎತ್ತಲಿವೆ. ಇದರಿಂದ ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಮೂಡಿರುವುದರೊಂದಿಗೆ 1000 ಕೋಟಿ ರೂ. ಅನುದಾನ ಮಂಜೂರಾಗುತ್ತಿದೆ.

ಬೆಂಗಳೂರಿನ ಸಮೀಪದಲ್ಲಿ ಕ್ವಾಂಟಮ್ ಸಿಟಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಗೂ ಇದರ ಪರಿಣಾಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಜ್ಞಾನಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ರಚಿಸಲು ಸರ್ಕಾರ ಮುಂದಾಗಿದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಈ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸ್ವಿಟ್ಜರ್ಲೆಂಡ್‌ನಲ್ಲಿ ನಡೆದ 'ಸ್ವಿಸ್‌ನೆಕ್ಸ್ ಕ್ವಾಂಟಮ್ ಸಮ್ಮಿಟ್'ನಲ್ಲಿ ಪ್ರಮುಖ ಉದ್ಯಮಿಗಳೊಂದಿಗೆ ಮಾತುಕತೆ ನಡೆದಿದೆ. ಬೆಂಗಳೂರಿನಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಪ್ರಮುಖ ಉದ್ಯಮಿಗಳಿಗೆ ಆಹ್ವಾನ ನೀಡಿರುವುದಾಗಿಯೂ ಅವರು ಹೇಳಿದ್ದಾರೆ.
ಭೂಮಿ ಮಂಜೂರು: 7,000 ಕೋಟಿ ರೂ. ಅನುದಾನ!
ಕರ್ನಾಟಕ ಸರ್ಕಾರವು ಕ್ವಾಂಟಮ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಭೂಮಿ ಮಂಜೂರು ಮಾಡಿದೆ. ಅಲ್ಲದೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ಅನುದಾನ ಮೀಸಲಿರಿಸಿದೆ. "ಕ್ವಾಂಟಮ್ ಸಿಟಿ" (Quantum City / Q-City) ಸ್ಥಾಪನೆಗಾಗಿ ಕರ್ನಾಟಕ ಸರ್ಕಾರ ಬೆಂಗಳೂರಿನ ಸಮೀಪದಲ್ಲಿರುವ ಹೆಸರಘಟ್ಟದಲ್ಲಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಈ ಭೂಮಿ ಕ್ವಾಂಟಮ್ ತಂತ್ರಜ್ಞಾನಗಳಲ್ಲಿ ಸಂಶೋಧನೆ, ನವೋದ್ಯಮಗಳು ಮತ್ತು ಶೈಕ್ಷಣಿಕ-ಉದ್ಯಮ ಸಹಯೋಗಕ್ಕೆ ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲು ಉದ್ದೇಶಿಸಲಾಗಿದೆ.
ಅಲ್ಲದೇ ಮುಖ್ಯವಾಗಿ ಆರೋಗ್ಯ, ಕೃಷಿ, ವಿದ್ಯುತ್ ಕ್ಷೇತ್ರದಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್ ಬಳಕೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಅಲ್ಲದೇ ಉದ್ದೇಶಿತ "ಕ್ವಾಂಟಮ್ ಸಿಟಿ" ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ 1000 ಕೋಟಿ ರೂ. ಅನುದಾನ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಘೋಷಿಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರವು 6,000 ಕೋಟಿ ರೂಪಾಯಿ ಕಾಯ್ದಿರಿಸಿದೆ ಎಂದು ಎನ್.ಎಸ್.ಬೋಸರಾಜು ಅವರು ಹೇಳಿದ್ದಾರೆ.
ಟಾಸ್ಕ್ ಫೋರ್ಸ್ ರಚನೆ: ಇನ್ನು ಕ್ವಾಂಟಮ್ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕ್ವಾಂಟಮ್ ತಂತ್ರಜ್ಞಾನಕ್ಕೆ ಪೂರಕ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ರಚನೆ ಮಾಡುತ್ತಿರುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ.












Click it and Unblock the Notifications