ಬೆಂಗಳೂರು -ಮಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: ನುಜ್ಜುಗುಜ್ಜಾದ 7 ಕಾರುಗಳು
Accident News: ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಸಂಭವಿಸುತ್ತಲೇ ಇವೆ. ಇತ್ತೀಚೆಗಷ್ಟೇ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಇನ್ನು ಇದೀಗ ನಿನ್ನೆ (ಫೆಬ್ರವರಿ 16) ತಡರಾತ್ರಿ ಬೆಂಗಳೂರು-ಮಂಗಳೂರು ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಈ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಕಾರುಗಳು ನುಜ್ಜುಗುಜ್ಜುಗೊಂಡಿವೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದ್ದು, ಹೊಸದಾಗಿ ಆರಂಭವಾಗಿರುವ ಚೋಲಗೆರೆ ಟೋಲ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಹಿಂಬದಿಯಿಮದ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದ್ದು, ಈ ರಭಸಕ್ಕೆ ಆ ಕಾರುಗಳೆಲ್ಲ ಜಖಂಗೊಂಡಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸರಣಿ ಅಪಘಾತ ಸಂಭವಿಸಿದ ಹಿನ್ನೆಲೆ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತ ಆಗಿತ್ತು. ಬಳಿಕ ಸ್ಥಣಕ್ಕೆ ಭೇಟಿ ನೀಡಿದ ಪೊಲೀಸರು ಜಖಂಗೊಂಡ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಆಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಾರುಗಳ ಅಪಘಾತ: ಎರಡು ಕಾರುಗಳು ಅಪಘಾತಕ್ಕಿಡಾಗಿ ಇಬ್ಬರು ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಬಳಿಯ ಇದೇ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಬ್ಯಾರಿಕೇಡ್ ಇದೆ ಎಂದು ದಿಢೀರ್ ಬ್ರೇಕ್ ಹಾಕಿ ನಿಂತಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ.
ಈ ವೇಳೆ ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications