ಬೆಂಗಳೂರು:ಲಂಚ ಪಡೆಯುವಾಗ ಎಸಿಬಿ ಕೈಗೆ ಸಿಕ್ಕಿಬಿದ್ದ ಮಹಿಳಾ ತಹಶೀಲ್ದಾರ್
ಬೆಂಗಳೂರು, ಅಕ್ಟೋಬರ್ 06:ಮಹಿಳಾ ತಹಶೀಲ್ದಾರ್ ಒಬ್ಬರು ಲಂಚ ಪಡೆಯುತ್ತಿದ್ದಾಗ ಎಸಿಬಿ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸಿಬಿಐ ಬಲೆಗೆ ಬಿದ್ದ ಇಬ್ಬರು ಲಂಚಕೋರ ಜಿಎಸ್ಟಿ ಆಫೀಸರ್ಸ್
ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
2 ಲಕ್ಷ ಲಂಚ ಪಡೆದ ಪ್ರಸನ್ನಕುಮಾರ್ ಕೂಡ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇನ್ನೂ ಕೇವಲ 20 ದಿನದಲ್ಲಿ ವಿಶೇಷ ತಹಶೀಲ್ದಾರ್ ಲಕ್ಷ್ಮೀ ನಿವೃತ್ತಿ ಹೊಂದಬೇಕಿತ್ತು. ಇವರು ಕೆ.ಜಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿರುವ ವಿಶೇಷ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಜಮೀನು ಆರ್.ಟಿ.ಸಿ ಮಾಡಿ ಕೊಡುವ ಕೆಲಸಕ್ಕೆ ಲಕ್ಷ್ಮೀ ಮತ್ತು ಪ್ರಸನ್ನ ಕುಮಾರ್ ಸೇರಿಕೊಂಡು 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರ್ಗೆ ಎಂದು ಅವರೇ ಹಂಚಿಕೊಂಡಿದ್ದರು. ಈ ವೇಳೆ ಲಕ್ಷ್ಮೀ 5 ಲಕ್ಷ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.