7 ಮಹಾನಗರ ಪಾಲಿಕೆಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ!
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನು ಸಹ ಸೇರ್ಪಡೆ ಮಾಡಿ ಸರಹದ್ದು ನಿಗದಿಪಡಿಸಲಾಗಿತ್ತು. ಆದರೆ, ಕೆಲ ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಾರೆ. ಇದು ಕಷ್ಟದ ಕೆಲಸವಾಗಿದೆ. ಸರ್ಕಾರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿದ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡಲಿದೆ, ಶಾಸಕರು ತಾಳ್ಮೆ ವಹಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವರ ಪರವಾಗಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ವಿವರವಾಗಿ ಉತ್ತರ ನೀಡಿದ್ದಾರೆ.
ಇನ್ನು ಕರ್ನಾಟಕ ಪೌರಸಭೆಗಳ ಅಧಿನಿಯಮದ ಮಾನದಂಡಗಳ ಪ್ರಕಾರ, 20,000 ದಿಂದ 50,000 ಜನಸಂಖ್ಯೆ ಇರುವ ಅಥವಾ ಚದರ ಮೀಟರ್ಗೆ 1,500 ಜನಸಾಂದ್ರತೆ, 9 ಲಕ್ಷ ರೂಪಾಯಿ ರಾಜಸ್ವ ಆದಾಯ ಅಥವಾ ಶೇ.50 ರಷ್ಟು ಕೃಷಿಯೇತರ ಚಟುವಟಿಕೆ ನಡೆಯುತ್ತಿದ್ದರೆ ಈ ನಿರ್ದಿಷ್ಟ ಸ್ಥಳವನ್ನು ಪುರಸಭೆಯನ್ನಾಗಿ ಉನ್ನತೀಕರಿಸಲಾಗುವುದು. ಆದರೆ, ಹೊನ್ನಾವರ ಪಟ್ಟಣದಲ್ಲಿ 2011ರ ಜನಗಣತಿ ಅನ್ವಯ 19,109 ಜನಸಂಖ್ಯೆಯಿದೆ. ಈ ಹಿನ್ನಲೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಲಾಗಿದೆ ಎಂದು ಸಚಿವ ಬೈರತಿ ಸುರೇಶ್ ಅವರು ವಿವರಿಸಿದ್ದಾರೆ.
ಧಾರವಾಡ - ಹುಬ್ಬಳ್ಳಿ: ಪ್ರತ್ಯೇಕ ಪಾಲಿಕೆ ರಚನೆ
ಇನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದ್ದು, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿರುವ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಆಕ್ಷೇಪಣೆ / ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ.
ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಪೌರ ಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ
ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಹೇಳಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್ಎಫ್ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು.
ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ. 40 ರಷ್ಟು ಸರ್ಕಾರದಿಂದ ಹಾಗೂ ಶೇ. 60 ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications