ಬೆಂಗಳೂರು: ರಸ್ತೆಯಲ್ಲೇ ಕತ್ತು ಸೀಳಿ ವೃದ್ಧನ ಬರ್ಬರ ಹತ್ಯೆ

ಬೆಂಗಳೂರು, ಫೆಬ್ರವರಿ 14: ರಸ್ತೆಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಕತ್ತು ಸೀಳಿ ವೃದ್ಧನ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಗುಬ್ಬಲಾಳ ಸಮೀಪ ನಡೆದಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತರನ್ನು ಮಾಧವ್(70) ಎಂದು ಗುರುತಿಸಲಾಗಿದೆ. ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಹಿಂದಿನಿಂದ ಚಾಕುವಿನಿಂದ ಕತ್ತು ಸೀಳಿ ಪರಾರಿಯಾಗಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ.

70 Year Old Man Stabbed To Death In Bengaluru

ರಕ್ತದ ಮಡುವಿನಲ್ಲಿದ್ದ ವೃದ್ಧರನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಆಸ್ತಿಗಾಗಿ ಕಲಹಗಳು ನಡೆಯುತ್ತಿದ್ದು, ಸಂಬಂಧಿಕರಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+