ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಒಂದೇ ದಿನ 72 ಪೊಲೀಸರಿಗೆ ಕೊರೊನಾವೈರಸ್ ಸೋಂಕು

|
Google Oneindia Kannada News

ಬೆಂಗಳೂರು, ಜುಲೈ.10: ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ರನ್ನೂ ಮಹಾಮಾರಿಯ ಭೀತಿ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಒಂದರಲ್ಲೇ 72 ಮಂದಿ ಪೊಲೀಸರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ಇದುವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 502 ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗಿದೆ.

ಭಾರತದಲ್ಲಿ ಒಂದೇ ದಿನ 73 ಬಿಎಸ್ಎಫ್ ಯೋಧರಿಗೂ ಕೊವಿಡ್-19 ಸೋಂಕುಭಾರತದಲ್ಲಿ ಒಂದೇ ದಿನ 73 ಬಿಎಸ್ಎಫ್ ಯೋಧರಿಗೂ ಕೊವಿಡ್-19 ಸೋಂಕು

ಶುಕ್ರವಾರ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್ ಠಾಣೆಯ 6 ಪೊಲೀಸರು, ಸಂಜಯ್ ನಗರ ಠಾಣೆಯ 8 ಪೊಲೀಸರು ಸೇರಿದಂತೆ ಒಟ್ಟು 72 ಪೊಲೀಸರಿಗೆ ಸೋಂಕು ತಗಲಿದೆ. ಇನ್ನು, ಶುಕ್ರವಾರ 38 ಪೊಲೀಸ್ ಸಿಬ್ಬಂದಿ ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

72 Bangalore Police Tested Positive for Coronavirus In Single Day

ಕರ್ನಾಟಕದಲ್ಲಿ 2313 ಮಂದಿಗೆ ಕೊರೊನಾವೈರಸ್:
ರಾಜ್ಯದಲ್ಲಿ 24 ಗಂಟೆಗಳಲ್ಲೇ 2313 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 33418ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಯ ಅಟ್ಟಹಾಸ ಯಥಾರೀತಿಯಲ್ಲಿ ಮುಂದುವರಿದಿದೆ. ಒಂದೇ ದಿನ 1447 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 15329ಕ್ಕೆ ಏರಿಕೆಯಾಗಿದೆ. ಒಂದೇ ದಿನ ರಾಜ್ಯದಲ್ಲಿ 57 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, ಈ ಪೈಕಿ ಬೆಂಗಳೂರು ಒಂದರಲ್ಲೇ 29 ಕೊರೊನಾವೈರಸ್ ಸೋಂಕಿತರು ಉಸಿರು ಚೆಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 543ಕ್ಕೆ ಏರಿಕೆಯಾಗಿದೆ.

English summary
72 Bangalore Police Tested Positive for Coronavirus In Single Day. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X