ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಮರಳುವವರಿಗೆ ಉದ್ಯೋಗ :ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಆಗಸ್ಟ್ 15: 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯವನ್ನುದ್ದೇಶಿಸಿ ಮಾತನಾಡಿದರು.

Recommended Video

74th Independence Day Celebration by JDS at JP Bhavan, Bangalore | Oneindia Kannada

-ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ, ಕೊವಿಡ್ 19 ಎಂಬ ಮಹಾ ಪಿಡುಗಿನ ವಿರುದ್ಧಧ ಹೋರಾಟದ ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿಯ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ

ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಐಡಿ: ಮೋದಿ ಘೋಷಣೆ ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಐಡಿ: ಮೋದಿ ಘೋಷಣೆ

-ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಂತೆ ರಾಜ್ಯಾದ್ಯಂತ ಉದ್ಯೋಗವಾಕಾಶಗಳನ್ನು ಸೃಷ್ಟಿಸುವತ್ತ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಮರಳುವವರಿಗೆ ಅವರು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ.

74th Independence Day: BS Yediyurappa Speech Highlights

-ದಾಖಲೆಯ ಮಳೆ ಮತ್ತು ಪ್ರವಾಹದ ಜೊತೆಗೆ ಬರ ಹಾಗೂ ಶತಮಾನದಲ್ಲೇ ಭಯಾನಕವಾದ ಸಾಂಕ್ರಾಮಿಕ ಪಿಡುಗು ದೊಡ್ಡ ವಾಲುಗಳನ್ನು ತಂದೊಡ್ಡಿದೆ. ಆರ್ಥಿಕ ಹಿಂಜರಿಕೆ, ಉದ್ಯೋಗ ಕಡಿತ ಹಾಗೂ ಬೊಕ್ಕಸಕ್ಕೆ ರಾಜಸ್ವ ನಷ್ಟ, ಸ್ಥಬ್ಧವಾದ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

-ಬೆಂಗಳೂರು ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಸ್ಪತ್ರೆಗಳು, ಫಿವರ್ ಕ್ಲಿನಿಕ್‌ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ.

-ಆಯುಷ್ಮಾನ್ ಭಾರತ್ ಯೋಜನೆಯಲ್ಲಿ 1.31 ಕೋಟಿಗಿಂತಲೂ ಹೆಚ್ಚು ಜನರಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹಾಗೂ 1694 ಕೋಟಿ ರೂ ವೆಚ್ಚದಲ್ಲಿ ಈವರೆಗೆ 8.5 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ.

-ನೇಗಿಲ ಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಆದ್ಯತೆ, ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ 6 ಸಾವಿರ ರೂ ನಗದು ನೆರವಿನ ಜೊತೆಗೆ ಸರ್ಕಾರ ಹೆಚ್ಚುವರಿಯಾಗಿ 4 ಸಾವಿರ ರೂ ಆರ್ಥಿಕ ನೆರವಿನ 2 ಸಾವಿರ ರೂಗಳ ಮೊದಲ ಕಂತನ್ನು 50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತದೆ.

English summary
Karnataka chief minister BS Yediyurappa on Saturday addressed the nation on 74th Independence
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X