• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೂಜಾಟದಲ್ಲಿ ತೊಡಗಿದ್ದ 77 ಮಂದಿ ಅರೆಸ್ಟ್‌

By Ashwath
|

ಬೆಂಗಳೂರು, ಜು.4- ಪ್ಯಾಲೆಸ್ ಗುಟ್ಟಹಳ್ಳಿ ವೃತ್ತದಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್‌ವೊಂದರಲ್ಲಿ ದಿ ಮೆಂಬರ್ಸ್ ಲಾಂಜ್ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 77 ಮಂದಿಯನ್ನು ಬಂಧಿಸಿದ್ದಾರೆ

ಬಂಧಿತರಿಂದ 1.83 ಲಕ್ಷ ರೂ. ಹಾಗೂ 55 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಅಕ್ರಮ ಬಯಲಿಗೆಳೆದ ಯೋಧ ಸೇವೆಯಿಂದ ವಜಾ]

ಅಂದರ್ ಬಾಹರ್- ಮೂವರ ಬಂಧನ: ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಪಟೇಲ್ ಮುನಿಯಪ್ಪ ಲೇಔಟ್‌ನಲ್ಲಿ ಮನೆಯೊಂದರ ಮಹಡಿ ಮೇಲಿನ ಕೊಠಡಿಯಲ್ಲಿ ಅಂದರ್-ಬಾಹರ್ ಆಡುತ್ತಿದ್ದ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ 2.4 ಲಕ್ಷ ರೂ. ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
The CCB sleuths raided a gambling Members Club at Guttahalli circle in Vyalikaval on Thursday evening and arrested 77 men.The police recovered Rs 1.83 lakh in cash from the arrested and a case has been registered at Vyalikaval police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X