Get Updates
Get notified of breaking news, exclusive insights, and must-see stories!

77ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು...

ಬೆಂಗಳೂರು ಆಗಸ್ಟ್ 15: 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ನಾಡಿನೆಲ್ಲೆಡೆ ಕಳೆ ಕಟ್ಟಿದೆ. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಬಳಿಕ ಸಿಎಂ ಗೌರವ ವಂದನೆ ಸ್ವೀಕಾರದರು.

ಧ್ವಜಾರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.

77th Independence Day 2023: Highlights of CM Siddaramaiahs speech after flag hoisting

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯವನ್ನು ಎತ್ತಿ ತೋರಿಸಿದರು.

ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು. ಸ್ವಾತಂತ್ರ್ಯವೇನೊ ಲಭಿಸಿತು. ಆದರೆ ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೊಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಎಂದು ಪ್ರಶ್ನೆ ಮಾಡಿದರು.

77th Independence Day 2023: Highlights of CM Siddaramaiahs speech after flag hoisting

"ಕತ್ತಿ ಪರದೇಶಿಯಾದರೆ ಮಾತ್ರ ನೋವೆ?

ನಮ್ಮವರೆ ಹದಹಾಕಿ ತಿವಿದರದು ಹೂವೆ?" ಎಂದು ಪ್ರಶ್ನಿಸಿದ್ದಾರೆ.

ಇದನ್ನೆಲ್ಲ ಮನಗಂಡೆ ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದರು.

ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ ಎಂದು ಸಿಎಂ ಹೇಳಿದರು.

Gandhi's talisman ಎಂದು ಹೆಸರಾದ ಚಿಂತನೆಯ ನೆರಳಲ್ಲೇ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+