ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಭೀತಿ; ಬೆಂಗಳೂರಲ್ಲಿ ಶೇ 78ರಷ್ಟು ಹಾಸಿಗೆ ಲಭ್ಯವಿದೆ

|
Google Oneindia Kannada News

ಬೆಂಗಳೂರು, ಜುಲೈ 07 : ಕೋವಿಡ್ - 19 ಸೋಂಕಿತರಿಗೆ ಬೆಂಗಳೂರು ನಗರದಲ್ಲಿ ಹಾಸಿಗೆಗಳ ವ್ಯವಸ್ಥೆ ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಶೇ 78ರಷ್ಟು ಹಾಸಿಗೆಗಳು ಖಾಲಿ ಇವೆ.

ನಗರದಲ್ಲಿ ಹಾಸಿಗೆ ಸಿಗದೆ ಕೊರೊನಾ ವೈರಸ್ ಸೋಂಕಿತರು ಪರದಾಡುತ್ತಿದ್ದಾರೆ ಎಂಬ ಮಾಧ್ಯಮಗಳ ವರದಿ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಿದೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ 50ರಷ್ಟು ಹಾಸಿಗೆ ಸರ್ಕಾರ ಕಳುಹಿಸುವ ರೋಗಿಗೆಖಾಸಗಿ ಆಸ್ಪತ್ರೆಗಳಲ್ಲಿ 50ರಷ್ಟು ಹಾಸಿಗೆ ಸರ್ಕಾರ ಕಳುಹಿಸುವ ರೋಗಿಗೆ

"ಬೆಂಗಳೂರು ನಗರದಲ್ಲಿ ಕೋವಿಡ್ - 19 ಸೋಂಕಿತರಿಗೆ ಲಭ್ಯವಿರುವ ಬೆಡ್‌ಗಳ ಮಾಹಿತಿ ಒದಗಿಸಲು 'ಸೆಂಟ್ರಲ್ ಬೆಡ್ ಅಲಾಟ್‌ಮೆಂಟ್ ಸಿಸ್ಟಮ್' ಸಾಫ್ಟ್‌ವೇರ್ ತಯಾರು ಮಾಡಲಾಗುತ್ತಿದೆ. ಯಾವ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿದೆ" ಎಂದು ಇದರ ಮೂಲಕ ತಿಳಿಯಬಹುದು ಎಂದು ಸಚಿವರು ತಿಳಿಸಿದ್ದಾರೆ.

ಕೊರೊನಾ ಭೀತಿ; ಮಹಾನಗರಗಳಲ್ಲಿ ಬೆಂಗಳೂರು ಸುರಕ್ಷಿತ! ಕೊರೊನಾ ಭೀತಿ; ಮಹಾನಗರಗಳಲ್ಲಿ ಬೆಂಗಳೂರು ಸುರಕ್ಷಿತ!

78 Percent Of Beds Free No Scarcity In Bengaluru

"ನಗರದ 72 ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು 3,331 ಬೆಡ್ ವ್ಯವಸ್ಥೆ ಮಾಡಲಾಗಿದೆ. ಶನಿವಾರದ ತನಕ 733 ಬೆಡ್ ಮಾತ್ರ ರೋಗಿಗಳಿಗೆ ನೀಡಲಾಗಿದೆ. ಇನ್ನೂ 2598 ಹಾಸಿಗೆಗಳು ಖಾಲಿ ಇವೆ" ಎಂದು ಸುಧಾಕರ್ ಹೇಳಿದರು.

ಮುಂಬೈ : ಕೊರೊನಾ ಸೋಂಕಿತರಿಗಾಗಿ 1000 ಹಾಸಿಗೆ ಆಸ್ಪತ್ರೆ ನಿರ್ಮಾಣ ಮುಂಬೈ : ಕೊರೊನಾ ಸೋಂಕಿತರಿಗಾಗಿ 1000 ಹಾಸಿಗೆ ಆಸ್ಪತ್ರೆ ನಿರ್ಮಾಣ

ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು 1,430 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಇವುಗಳಲ್ಲಿ 400 ಹಾಸಿಗೆ ಲಭ್ಯವಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಲಭ್ಯವಿರುವ ಶೇ 50ರಷ್ಟು ಹಾಸಿಗೆಗಳನ್ನು ಕಡಿಮೆ ಸೋಂಕಿನ ಗುಣಲಕ್ಷಣ ಇರುವ ರೋಗಿಗಳಿಗೆ ಮೀಸಲಿಡಲಾಗಿದೆ.

ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಗರದಲ್ಲಿ 981 ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 10,561ಕ್ಕೆ ಏರಿಕೆಯಾಗಿದೆ.

English summary
Medical education minister of Karnataka Dr. K. Sudhakar said that 78 percent of the COVID - 19 beds in private hospitals across Bengaluru city vacant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X