Breaking; ಬೆಂಗಳೂರಲ್ಲಿ 791 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಜೂನ್ 16; ದೇಶದ ವಿವಿಧ ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಹೊಸ ಕೋವಿಡ್ ಪ್ರಕರಣದಲ್ಲಿ ಏರಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ 833 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 791 ಪ್ರಕರಣಗಳು ಬೆಂಗಳೂರು ನಗರದಲ್ಲಿಯೇ ದಾಖಲಾಗಿವೆ.
ಗುರುವಾರದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ 24 ಗಂಟೆಯಲ್ಲಿ 458 ಜನರು ಗುಣಮುಖಗೊಂಡಿದ್ದಾರೆ. ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಬಳ್ಳಾರಿ 4, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 4, ದಕ್ಷಿಣ ಕನ್ನಡ 6, ಧಾರವಾಡ 3, ಕೋಲಾರ 4, ಮೈಸೂರು 12 ಮತ್ತು ಉತ್ತರ ಕನ್ನಡ 1 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ.
ರಾಜ್ಯದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4371 ಆಗಿದೆ. ಪ್ರತಿದಿನದ ಪಾಸಿಟಿವಿಟಿ ದರ 3.47 ಆಗಿದೆ. ಮರಣ ಪ್ರಮಾಣ ಶೇ 0.12 ಆಗಿದೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 3958824. ಇದುವರೆಗೂ ರಾಜ್ಯದಲ್ಲಿ 40068 ಜನರು ಸಾವನ್ನಪ್ಪಿದ್ದಾರೆ. 3914343 ಜನರು ಗುಣಮುಖಗೊಂಡಿದ್ದಾರೆ. ಇದುವರೆಗೆ 66686863 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.

ಬೆಂಗಳೂರು ನಗರದ ವರದಿ; ಬೆಂಗಳೂರು ನಗರದಲ್ಲಿ 791 ಹೊಸ ಕೋವಿಡ್ ಪ್ರಕರಣಗಳು 24 ಗಂಟೆಯಲ್ಲಿ ದಾಖಲಾಗಿವೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4199.
ನಗರದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1794128, ಇದುವರೆಗೂ 1772963 ಜನರು ಗುಣಮುಖಗೊಂಡಿದ್ದಾರೆ. ನಗರದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 16965.
ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಸರ್ಕಾರವು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.
— Dr Sudhakar K (@mla_sudhakar) June 15, 2022
ಎಲ್ಲಾ ಜಿಲ್ಲಾ ಕಣ್ಗಾವಲು (Surveillance) ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.@DHFWKA pic.twitter.com/5CLAEauaxw
ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ಹೆಚ್ಚಾದರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಆದರೆ ಮಾಸ್ಕ್ ಹಾಕದಿದ್ದರೆ ದಂಡವನ್ನು ವಿಧಿಸುತ್ತಿಲ್ಲ.











Click it and Unblock the Notifications