ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

7 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಯೋದು ಅನುಮಾನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 12: 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಚರ್ಚಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲು ವಿಫಲರಾದರು.

ಬೆಂಗಳೂರಿನ ನೃಪತುಂಗ ರಸ್ತೆಯ ಸರ್ವಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ೭ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿಲ್ಲ. ಹೀಗಾಗಿ ಇನ್ನೂ ಗೊಂದಲವೇ ಮುಂದುವರೆದಿದೆ.

 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 5ವರ್ಷ 5 ತಿಂಗಳು, ಗರಿಷ್ಠ 7 ವರ್ಷ! 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 5ವರ್ಷ 5 ತಿಂಗಳು, ಗರಿಷ್ಠ 7 ವರ್ಷ!

ಅತೀ ಶೀಘ್ರದಲ್ಲಿ ಮತ್ತೊಮ್ಮೆ ಸಭೆ ಸೇರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ನೂತನ ವರ್ಗಾವಣೆ ನೀತಿ, ಹೊಸ ಯೋಜನೆ ಸೇರ್ಪಡೆ, ಸೇರಿ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಬಜೆಟ್ ಹಿನ್ನೆಲೆಯಲ್ಲಿ ಅಭಿಪ್ರಾಯ ಸಂಗ್ರಹಿಸಲಾಯಿತು ಎಂದರು.

7th Class Public Examination Can Be Doubt

ಇದೇ ಸಂದರ್ಭದಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳು 2020ರ ಫೆಬ್ರವರಿಯೊಳಗೆ ಎಲ್ಲ ವಿಷಯಗಳ ಪಠ್ಯ ಬೋಧನೆ ಮುಗಿಸಿ, ವಿಶೇಷ ತರಗತಿಗಳನ್ನು ತೆಗೆದುಕೊಳ್ಳಬೇಕು, ಆ ಮೂಲಕ ವಿದ್ಯಾರ್ಥಿಗಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರಿಗೊಳಿಸಬೇಕು ಎಂದು ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಕಾರಿ ಆದೇಶ ಹೊರಡಿಸಿದ್ದಾರೆ.

ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ 'ಸಸ್ಪೆಂಡ್'ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ 'ಸಸ್ಪೆಂಡ್'

ಒಂದು ವೇಳೆ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆದರೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಅನುತ್ತೀರ್ಣ ಮಾಡುವುದಿಲ್ಲವೆಂದು ಶಿಕ್ಷಣ ಸಚಿವರು ಈಗಾಗಲೇ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತಾರಾದಲ್ಲಿ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು ಮತ್ತು ಅಂತಹ ಶಾಲೆಯ ನೋಂದಣಿ ಹಾಗೂ ಮಾನ್ಯತೆಯನ್ನು ರದ್ದುಗೊಳಿಸಲು ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.

English summary
The Department of Education has not yet to make clear decision on public exams for Class 7, which has led to suspicions of a public exam this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X