ವೇತನ ತಾರತಮ್ಯ ನಿವಾರಣೆಗೆ ಸಿದ್ಧ: ಪಿಯು ಉಪನ್ಯಾಸಕರಿಗೆ ಸಿಎಂ ಭರವಸೆ
ಬೆಂಗಳೂರು, ಮಾರ್ಚ್ 3: ಬಹು ದಿನದಿಂದ ಚರ್ಚೆಯಲ್ಲಿರುವ ಪದವಿಪೂರ್ವ ಉಪನ್ಯಾಸಕರ ವೇತನ ತಾರತಮ್ಯವನ್ನು ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಮತ್ತು ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪದಾಧಿಕಾರಿಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.

ಈ ಮೂಲಕ ಪ್ರತಿ ವರ್ಷ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಆರಂಭವಾಗುತ್ತಿದ್ದ ಮೌಲ್ಯಮಾಪನ ಬಹಿಷ್ಕಾರ ಪ್ರಹಸನ ಈ ಬಾರಿ ತಣ್ಣಗಾಗುವ ಸೂಚನೆ ಸಿಕ್ಕಿದೆ.
ಶಿಕ್ಷಕರು ಮತ್ತು ಉಪನ್ಯಾಸಕರಲ್ಲಿ ಅಸಮಾಧಾನ ಮೂಡಿಸಿರುವ ವೇತನ ತಾರತಮ್ಯವನ್ನು ನಿವಾರಿಸುವ ಉದ್ದೇಶದಿಂದ ಏಳನೇ ವೇತನ ಆಯೋಗ ರಚನೆಯಾಗಲಿದೆ. ಆಯೋಗದ ವರದಿಯ ಆಧಾರದ ಮೇಲೆ ವೇತನ ಪರಿಷ್ಕರಣೆ ಮಾಡಲಾಗುವುದು ಎಂದಿರುವ ಅವರು ಶಿಕ್ಷಕರು ಮತ್ತು ಉಪನ್ಯಾಸಕರು ಯಾವುದೇ ಕಾರಣಕ್ಕೂ ಮೌಲ್ಯಮಾಪನ ಬಹಿಷ್ಕರಿಸಬಾರದು ಎಂದು ಮನವಿ ಮಾಡಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಮತ್ತು ಮೌಲ್ಯಮಾಪನ ಮುಗಿಯುತ್ತಿದ್ದಂತೆಯೇ ಶಿಕ್ಷಕರ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ನಿರ್ಧರಿಸಲಾಗುವುದು. ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಚಳವಳಿ, ಗಲಾಟೆ ಎಬ್ಬಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ದಯವಿಟ್ಟು ಮುಷ್ಕರಕ್ಕೆ ಮುಂದಾಗಬೇಡಿ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸಹ ಉಪಸ್ಥಿತರಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ











Click it and Unblock the Notifications