ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ 8 ಮಹತ್ವದ ಸೂಚನೆಗಳು!
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನುವ ಗಂಭೀರವಾದ ಆರೋಪಗಳು ಕೇಳಿ ಬರುತ್ತಿವೆ. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ. ಕಸ ಸಂಗ್ರಹ ಹಾಗೂ ವಿಲೇವಾರಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತವು ಸಾಕಷ್ಟು ಕ್ರಮಗಳನ್ನು ಅನುಸರಿಸುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ಆಡಳಿತ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯಿಂದ ಕೆಲವೊಂದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಸದ ಸಮಸ್ಯೆಯು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇದೀಗ ಮತ್ತೆ ಕಸದ ಸಮಸ್ಯೆ ಬೆಂಗಳೂರಿನಲ್ಲಿ ಹೆಚ್ಚಳವಾಗಿದೆ ಎನ್ನುವ ದೂರು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಇದೀಗ ಈ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಘನತ್ಯಾಜ್ಯ ನಿರ್ವಹಣೆಯ ಪ್ರಾಥಮಿಕ ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ಸೇವಾದಾರರ ಸಂಘದ ಜೊತೆ ಸಭೆ ಸಿ.ಇ.ಓ ಕರೀಗೌಡ ಅವರು ಸಭೆ ನಡೆಸಿ ಮಾತನಾಡಿದ್ದು, ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯ ಪ್ರಾಥಮಿಕ ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ಇಂದು BSWML ಕಛೇರಿಯಲ್ಲಿ ಸೇವಾದಾರರ ಸಂಘದ ಜೊತೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೆಂಳೂರಿನ ಕಸದ ಸಮಸ್ಯೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಸೂಚನೆಗಳನ್ನು ಸಹ ಕೊಡಲಾಗಿದೆ.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:
* ಮುಷ್ಕರವನ್ನು ಕೈಬಿಡುವಂತೆ ಸೇವಾದಾರರ ಸಂಘದವರಲ್ಲಿ ಕೋರಿದ್ದು, ಅದಕ್ಕೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
* ಬಾಕಿ ಇರುವ ಬಿಲ್‌ಗಳನ್ನು ಆದ್ಯತೆಯ ಮೇರೆಗೆ ಪಾವತಿಸಲಾಗುವುದು.
* ತಿಂಗಳಿಗೊಮ್ಮೆ ಎಲ್ಲಾ ಸೇವಾ ಪೂರೈಕೆದಾರರೊಂದಿಗೆ ಸಭೆ ನಡೆಸಲಾಗುವುದು.
* ಇತರ ಬೇಡಿಕೆಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಲಾಗುವುದು ಮತ್ತು ಅದಕ್ಕೆ ಅನುಗುಣವಾಗಿ ಪರಿಹರಿಸಲಾಗುವುದು.
* ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ತ್ವರಿತ ಪಾವತಿಯನ್ನು ಸರಳೀಕರಿಸಲಾಗುವುದು.
* ಇಎಸ್ಐ ಮತ್ತು ಫಿಎಫ್ ಬಾಕಿಯಿದ್ದಲ್ಲಿ, ಕೂಡಲೆ ಪಾವತಿಸಲು ಕ್ರಮವಹಿಸಲಾಗುವುದು
* ಬಿಲ್ ಗಳನ್ನು ತಡ ಮಾಡದೆ ಆಗಿಂದ್ದಾಗ್ಗೆ ನೀಡಲು ಸೇವಾದಾರರಿಗೆ ಸೂಚನೆ.
ಈ ವೇಳೆ BSWML ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಆರ್ಥಿಕಾಧಿಕಾರಿ ರಾಜು, ಸೇವಾದಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಹಲವರು ಹಾಜರಿದ್ದರು.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications