ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಲಕ್ಷ ಮತದಾರರ ಸಂಖ್ಯೆ ಹೆಚ್ಚಳ

ಬೆಂಗಳೂರು, ಡಿಸೆಂಬರ್ 03: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎಷ್ಟು ವಾರ್ಡ್‌ಗಳಿಗೆ ನಡೆಯಲಿದೆ ಎಂಬುದು ಇನ್ನೂ ಗೊಂದಲದಲ್ಲಿಯೇ ಇದೆ. ಪಾಲಿಕೆ ಮತದಾರರ ಪಟ್ಟಿ ಸಿದ್ಧಪಡಿಸಿದ್ದು, 8 ಲಕ್ಷ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕ ಸರ್ಕಾರದ ವಾರ್ಡ್ ವಿಂಗಡನೆಯಂತೆ ಬಿಬಿಎಂಪಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದೆ. 2015ಕ್ಕೆ ಹೋಲಿಕೆ ಮಾಡಿದರೆ ನಗರದಲ್ಲಿ 8 ಲಕ್ಷ ಹೊಸ ಮತದಾರರು ಇದ್ದಾರೆ. ಈ ಮತದಾರರ ಪಟ್ಟಿ 198 ವಾರ್ಡ್‌ಗಳನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ.

ವಾರ್ಡ್‌ ಕಚೇರಿಗಳಲ್ಲಿ ಹೊಸ ಮತದಾರರ ಪಟ್ಟಿ ಇದೆ. ಜನರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ? ಎಂದು ತಿಳಿದುಕೊಳ್ಳಲು ವಾರ್ಡ್ ಕಚೇರಿಗಳಿಗೆ ಭೇಟಿ ನೀಡಬಹುದು. ಬಿಬಿಎಂಪಿ ವೆಬ್ ಸೈಟ್‌ನಲ್ಲಿಯೂ ಪಟ್ಟಿಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 8 Lakh New Voters In BBMP Limits

2011ರ ಜನಗಣತಿ ಆಧಾರದ ಮೇಲೆ ವಾರ್ಡ್‌ಗಳನ್ನು ಸರ್ಕಾರ ವಿಂಗಡನೆ ಮಾಡಿತ್ತು. ಮಾರ್ಚ್ 2ರಂದು ವಾರ್ಡ್ ಪುನರ್ ವಿಂಗಡನೆ ಮಾಡಿ, ಜೂನ್ 23ರಂದು ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು.

2020ರ ಬಿಬಿಎಂಪಿ ಚುನಾವಣೆಗೆ ಹೊಸ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವಂತೆ ಸೂಚನೆ ನೀಡಿತ್ತು. ಈಗ ಬಿಬಿಎಂಪಿ ಮತದಾರರ ಪಟ್ಟಿ ಸಿದ್ಧಪಡಿಸಿದೆ. ಆದರೆ, ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನದ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವನ್ನು ನೀಡಲಾಗಿದೆ.

ಕರ್ನಾಟಕ ಮುನ್ಸಿಪಲ್ ಕಾಯ್ದೆ 1976ಕ್ಕೆ ಕರ್ನಾಟಕ ಸರ್ಕಾರ ತಿದ್ದುಪಡಿ ತಂದಿದೆ. ಇದರಿಂದಾಗಿ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಏರಿಕೆಯಾಗಲಿದೆ.

ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪೂರ್ಣಗೊಂಡಿದೆ, ತೀರ್ಪು ಕಾಯ್ದಿರಿಸಲಾಗಿದೆ. ಒಂದು ವೇಳೆ 243 ವಾರ್ಡ್‌ಗೆ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದರೆ ಹೊಸ ಮತದಾರರ ಪಟ್ಟಿ ಸಿದ್ಧವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+