ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಲಕ್ಷ ಮತದಾರರ ಸಂಖ್ಯೆ ಹೆಚ್ಚಳ

|
Google Oneindia Kannada News

ಬೆಂಗಳೂರು, ಡಿಸೆಂಬರ್ 03: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎಷ್ಟು ವಾರ್ಡ್‌ಗಳಿಗೆ ನಡೆಯಲಿದೆ ಎಂಬುದು ಇನ್ನೂ ಗೊಂದಲದಲ್ಲಿಯೇ ಇದೆ. ಪಾಲಿಕೆ ಮತದಾರರ ಪಟ್ಟಿ ಸಿದ್ಧಪಡಿಸಿದ್ದು, 8 ಲಕ್ಷ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕ ಸರ್ಕಾರದ ವಾರ್ಡ್ ವಿಂಗಡನೆಯಂತೆ ಬಿಬಿಎಂಪಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದೆ. 2015ಕ್ಕೆ ಹೋಲಿಕೆ ಮಾಡಿದರೆ ನಗರದಲ್ಲಿ 8 ಲಕ್ಷ ಹೊಸ ಮತದಾರರು ಇದ್ದಾರೆ. ಈ ಮತದಾರರ ಪಟ್ಟಿ 198 ವಾರ್ಡ್‌ಗಳನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ.

ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸುವುದು ಸುಲಭಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸುವುದು ಸುಲಭ

ವಾರ್ಡ್‌ ಕಚೇರಿಗಳಲ್ಲಿ ಹೊಸ ಮತದಾರರ ಪಟ್ಟಿ ಇದೆ. ಜನರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ? ಎಂದು ತಿಳಿದುಕೊಳ್ಳಲು ವಾರ್ಡ್ ಕಚೇರಿಗಳಿಗೆ ಭೇಟಿ ನೀಡಬಹುದು. ಬಿಬಿಎಂಪಿ ವೆಬ್ ಸೈಟ್‌ನಲ್ಲಿಯೂ ಪಟ್ಟಿಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ

 8 Lakh New Voters In BBMP Limits

2011ರ ಜನಗಣತಿ ಆಧಾರದ ಮೇಲೆ ವಾರ್ಡ್‌ಗಳನ್ನು ಸರ್ಕಾರ ವಿಂಗಡನೆ ಮಾಡಿತ್ತು. ಮಾರ್ಚ್ 2ರಂದು ವಾರ್ಡ್ ಪುನರ್ ವಿಂಗಡನೆ ಮಾಡಿ, ಜೂನ್ 23ರಂದು ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು.

ಬಿಬಿಎಂಪಿ ಮೀಸಲಾತಿ ಪಟ್ಟಿ; ಮಾಜಿ ಮೇಯರ್‌ಗಳ ಕೈ ತಪ್ಪಿದ ವಾರ್ಡ್! ಬಿಬಿಎಂಪಿ ಮೀಸಲಾತಿ ಪಟ್ಟಿ; ಮಾಜಿ ಮೇಯರ್‌ಗಳ ಕೈ ತಪ್ಪಿದ ವಾರ್ಡ್!

2020ರ ಬಿಬಿಎಂಪಿ ಚುನಾವಣೆಗೆ ಹೊಸ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವಂತೆ ಸೂಚನೆ ನೀಡಿತ್ತು. ಈಗ ಬಿಬಿಎಂಪಿ ಮತದಾರರ ಪಟ್ಟಿ ಸಿದ್ಧಪಡಿಸಿದೆ. ಆದರೆ, ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನದ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವನ್ನು ನೀಡಲಾಗಿದೆ.

ಕರ್ನಾಟಕ ಮುನ್ಸಿಪಲ್ ಕಾಯ್ದೆ 1976ಕ್ಕೆ ಕರ್ನಾಟಕ ಸರ್ಕಾರ ತಿದ್ದುಪಡಿ ತಂದಿದೆ. ಇದರಿಂದಾಗಿ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಏರಿಕೆಯಾಗಲಿದೆ.

ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪೂರ್ಣಗೊಂಡಿದೆ, ತೀರ್ಪು ಕಾಯ್ದಿರಿಸಲಾಗಿದೆ. ಒಂದು ವೇಳೆ 243 ವಾರ್ಡ್‌ಗೆ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದರೆ ಹೊಸ ಮತದಾರರ ಪಟ್ಟಿ ಸಿದ್ಧವಾಗಬೇಕಿದೆ.

English summary
BBMP published the ward wise new voter list. 8 lakh new voters found in city compare to 2015. People may verify their name in list by visit their ward offices or BBMP website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X