ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ, ಬೆಂಗಳೂರಿಗಿಂದು ರಿಲೀಫ್
ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಮತ್ತೆ 8 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ ಮಾಧ್ಯಮ ಪ್ರಕಟಣೆ ಮಾಡಿರುವ ಇಲಾಖೆ, ಒಟ್ಟು ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಹೊಸ 8 ಪ್ರಕರಣಗಳ ಪೈಕಿ ಬೆಂಗಳೂರು 1, ದಕ್ಷಿಣ ಕನ್ನಡ 2, ಬಾಗಲಕೋಟೆ ಜಿಲ್ಲೆಯ ಜಮಖಂಡಿ 2, ವಿಜಯಪುರ 2, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ಈವರೆಗೆ 188 ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. 19 ಜನರ ಚೇತರಿಕೆ ಕಾಣದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 8 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 511ಕ್ಕೆ ಏರಿದೆ. ಇದುವರೆಗೆ ಒಟ್ಟು 188 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/JAR3SpBdoJ
— B Sriramulu (@sriramulubjp) April 27, 2020
ನಿನ್ನೆ ರಾಜ್ಯದಲ್ಲಿ ಕೇವಲ ಮೂರು ಸೋಂಕು ದೃಢಪಟ್ಟಿತ್ತು. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೂ 8 ಕೇಸ್ ವರದಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಒಂದು ಕೇಸ್ ಕೂಡ ಇರಲಿಲ್ಲ. ಇಂದು ಕೇವಲ ಒಂದು ಪ್ರಕರಣ ಮಾತ್ರ ಕಾಣಿಸಿಕೊಂಡಿದೆ. ಹಾಗಾಗಿ, ಬೆಂಗಳೂರಿಗೆ ಸ್ವಲ್ಪ ಮಟ್ಟಿಗೆ ರಿಲೀಫ್ ಸಿಕ್ಕಿದೆ.

ಲಾಕ್‌ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ಮಾಡುತ್ತಿದ್ದಾರೆ. ಮೇ 3ರ ಬಳಿಕ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಯಬೇಕಾ ಅಥವಾ ತೆರವುಗೊಳಿಸಬೇಕಾ ಎಂಬುದು ಈ ಸಭೆಯ ಬಳಿಕ ತೀರ್ಮಾನವಾಗಲಿದೆ.












Click it and Unblock the Notifications