• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಎಂಟು ಡ್ರಗ್ ಪೆಡ್ಲರ್ ಗಳ ಬಂಧನ

|

ಬೆಂಗಳೂರು, ಫೆಬ್ರವರಿ 22: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರು ಮಂದಿ ಡ್ರಗ್ ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎಂಡಿಎಂಎ ಮತ್ತು ಕೊಕೈನ್ ಮಾರಾಟ ಜಾಲದಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಕಾರ್ಯಾಚರಣೆ ನಡೆಸಿದ ಉಪ್ಪಾರಪೇಟೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಒಟ್ಟು ಎಂಟು ಮಂದಿ ಡ್ರಗ್ ಪೆಡ್ಲರ್ ಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರ್. ಟಿ.ನಗರದಲ್ಲಿ ಇಬ್ಬರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಆಗಸ್ಟಿನ್ ಒಕಾಪೋರ್ (38) ಅಚುನಿಜೆ ನಾಪೋರ್ (36 ) ಬಂಧಿತ ಆರೋಪಿಗಳು.

ಇವರಿಂದ 20 ಗ್ರಾಂ ಕೊಕೇನ್, 13 ಗ್ರಾಂ ಎಂಡಿಎಂಎ, ಎಕ್ಸೆಟೆಸಿ ಪಿಲ್ಸ್ , ಆರು ಮೊಬೈಲ್ ಜತೆಗೆ ಒಂದು ಹೋಂಟಾ ಸಿಟಿ ಕಾರು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ಐದು ಲಕ್ಷ ರೂ. ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ಕೇಸು ದಾಖಲಿಸಿದ್ದಾರೆ.

   ಒಂದು ವಾರಗಳ ಕಾಲ ಮಹಾರಾಷ್ಟ್ರದ ಅಮರಾವತಿ ಲಾಕ್‌ಡೌನ್‌! | Oneindia Kannada

   ಮತ್ತೊಂದು ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರು ಡ್ರಗ್ ಪೆಡ್ಲರ್ ಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ 9 ,5 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮದನ್, ರಂಜಿತ್ ಕುಮಾರ್, ಮಹಾರ್ಸಯ್ಯ ನಾಯಕ್, ಚಂದನ್ ದಿಗಾಲ್, ಮುಕುಂದ ರಾಜ್, ಮೋನೀಶ್ ಬಂಧಿತರು. ಇವರಿಂದ ಐದು ಮೊಬೈಲ್, ಒಂದು ಬೈಕ್ ಹಾಗು ಎಲೆಕ್ಟ್ರಾಣಿಕ್ ತೂಕದ ಯಂತ್ರ ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   English summary
   Bengaluru police have been arrested eight drug peddlers in the two separate cases
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X