• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೊಬ್ಬ ಬಾಲಕ ಕೊನೆಯುಸಿರು

|

ಬೆಂಗಳೂರು, ಜೂನ್ 4: ವಿದ್ಯುತ್ ತಂತಿ ಸ್ಪರ್ಶಿಸಿ ಇನ್ನೋರ್ವ ಬಾಲಕ ಕೊನೆಯುಸಿರೆಳೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೂರ್ನಾಲ್ಕು ತಿಂಗಳಲ್ಲಿ ಈಗಾಗಲೇ 7 ಮಂದಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮತ್ತಿಕೆರೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಂಡಿದ್ದ ಬಾಲಕ ಸಾವು

ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಆ ಸಂದರ್ಭದಲ್ಲಿ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದ್ದು ಅಲ್ಲೇ ಕುಸಿದುಬಿದ್ದಿದ್ದಾನೆ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ನಂತರ ಮತ್ತಿಕೆರೆಯ ಬಳಿ ವಿದ್ಯುತ್ ತಗುಲಿ ಲಿಖಿಲ್(14) ಮೃತಪಟ್ಟಿದ್ದನು. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
In a shocking incident, a 8-year-old boy was electrocuted to death In school in JP Nagar Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X