ಬೆಂಗಳೂರು ವಿಚಾರದಲ್ಲಿ ಕೇರಳ ಸರ್ಕಾರ ಟೀಕೆ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ: ಕನ್ನಡಿಗರು ಹೇಳಿದ್ದೇನು
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿರುವ ಒತ್ತುವರಿ ತೆರವು ಕಾರ್ಯಾಚರಣೆಯು ಇದೀಗ ದೇಶದಾದ್ಯಂತ ಸುದ್ದಿಯಾಗಿದೆ. ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಈಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆಯನ್ನು ನಡೆಸಿತ್ತು. ಇದಕ್ಕೆ ಕಾಂಗ್ರೆಸ್ ಸರ್ಕಾರವು ಉತ್ತರ ಪ್ರದೇಶದ ಬುಲ್ಡೋಜರ್ ನೀತಿಯನ್ನು ಅನುಸರಿಸುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕರ್ನಾಟಕ ಬಿಜೆಪಿ ಸಹ ವಿರೋಧ ವ್ಯಕ್ತಪಡಿಸಿದೆ. ಇಷ್ಟಕ್ಕೂ ಏನಿದು ಬೆಳವಣಿಗೆ ಎನ್ನುವ ವಿವರ ಇಲ್ಲಿದೆ.

ಕೆ.ಸಿ ವೇಣುಗೋಪಾಲ್ ಟ್ವೀಟ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬೆಂಗಳೂರಿನಲ್ಲಿ ಮನೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಕೆಲವು ವಿಚಾರದಲ್ಲಿ ಸಹಾನುಭೂತಿಯಿಂದ ನಡೆದುಕೊಳ್ಳಬೇಕಿತ್ತು ಎಂದಿದ್ದಾರೆ.
ಅಲ್ಲದೇ ತಾವೇ ಸ್ವತಃ ಸಂತ್ರಸ್ತರ ಜೊತೆ ವೈಯುಕ್ತಿಕವಾಗಿ ಮಾತನಾಡುತ್ತೇನೆ. ಸಂತ್ರಸ್ಥರಿಗೆ ಪುನರ್ ವಸತಿ ಕಲ್ಪಿಸಿಕೊಡಲಿದ್ದೇವೆ ಎನ್ನುವ ಭರವಸೆಯನ್ನೂ ಕೆಸಿ ವೇಣುಗೋಪಾಲ್ ಕೊಟ್ಟಿದ್ದಾರೆ. ಇದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಕನ್ನಡಿಗರು ಹಾಗೂ ವಿರೋಧ ಪಕ್ಷಗಳು ಕರ್ನಾಟಕದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದು, ಅಕ್ರಮವಾಗಿ ನೆಲಸಿದವರಿಗೆ ಪುನರ್ ವಸತಿ ಕಲ್ಪಿಸುವ ಅವಶ್ಯಕತೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕೆಲವು ವಿಚಾರಗಳನ್ನ ಗಮನದಲ್ಲಿಟ್ಟುಕೊಂಡು, ಅಂತಹ ಕ್ರಮಗಳನ್ನು ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಎಐಸಿಸಿ ಕಳವಳ ವ್ಯಕ್ತಪಡಿಸುತ್ತೆ. ಕುಂದು - ಕೊರತೆಗಳನ್ನು ಪರಿಹರಿಸಲು ಸೂಕ್ತವಾದ ಕಾರ್ಯವಿಧಾನ ಜಾರಿಗೆ ತರಲಾಗುವುದು ಹಾಗೂ ಸಂತ್ರಸ್ತರಿಗೆ ಪುನರ್ ವಸತಿ ಮತ್ತು ಪರಿಹಾರ ಕೊಡಲಾಗುವುದು ಎಂದೂ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.
ಕನ್ನಡಿಗರ ವಿರೋಧ
ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿರುವುದು ಕನ್ನಡಿಗರ ವಿರೋಧಕ್ಕೆ ಕಾರಣವಾಗಿದೆ. ನೀವು ತುಂಬಾ ಕರುಣಾಮಯಿ, ಆ ಅಕ್ರಮ ವಲಸಿಗರನ್ನು ವಾಪಸ್ ಕರೆದುಕೊಂಡು ಹೋಗಿ ಕ್ಷೇತ್ರದಲ್ಲಿ ಆಶ್ರಯ ಒದಗಿಸಿ. ಕರ್ನಾಟಕದಲ್ಲಿ ಏನು ಮಾಡಬೇಕೆಂದು ಸೂಚನೆಗಳನ್ನು ನೀಡಬೇಡಿ ನೀವು ಕರ್ನಾಟಕದ ಚುನಾಯಿತ ಪ್ರತಿನಿಧಿಯಲ್ಲವೇ.
ಕೇರಳದಿಂದ ಕರ್ನಾಟಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಜನರ ವಲಸೆಯನ್ನು ನಿಲ್ಲಿಸಿ ಎಂದು ವಿನಯ್ ಗೌಡ ಎನ್ನುವವರು ಟ್ವೀಟ್ (Kaasiddore_Bossu) ಮಾಡಿದ್ದಾರೆ. ರೋಹಿತ್ ಸಿಂಹ ಎನ್ನುವವರು, ಕರ್ನಾಟಕದ ಆಂತರಿಕ ವಿಷಯಗಳಲ್ಲಿ ನೀವು ಯಾಕೆ ಮೂಗು ತೂರಿಸುತ್ತಿದ್ದೀರಿ ಸರ್. ನಾವು ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದೇವೆ, ಅದು ಕಾರ್ಯನಿರ್ವಹಿಸಲು ಬಿಡಿ ಎಂದು ಹೇಳಿದ್ದಾರೆ. ಕರ್ನಾಟಕ ಸರ್ಕಾರ ದೆಹಲಿಯಿಂದ ಆದೇಶ ಪಡೆಯುತ್ತಿದೆ. ಕನ್ನಡಿಗ ಪ್ರೈಡ್ ವಾರಿಯರ್ಸ್‌ಗೆ ಈಗ ಏನಾಯಿತು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.
ಜಿಬಿಎ ಆಯುಕ್ತ ಟ್ವೀಟ್
ಕೋಗಿಲು ಗ್ರಾಮದ ಸರ್ಕಾರಿ ಗೋಮಾಳ ಜಮೀನಿನ ಸರ್ವೆ ಸಂಖ್ಯೆ 99 ರಲ್ಲಿ 15 ಎಕರೆ ವಿಸ್ತೀರ್ಣವನ್ನು ಬಿಬಿಎಂಪಿಗೆ ಮಂಜೂರು ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ ಟ್ವೀಟ್ ಮಾಡಿದ್ದಾರೆ. ಇದು ಘನತ್ಯಾಜ್ಯ ವಿಲೇವಾರಿಗೆ ಬಳಸಲಾಗುವ ಕ್ವಾರಿ ಭೂಮಿಯಾಗಿದ್ದು, ಮಾನವ ವಾಸಕ್ಕೆ ಅತ್ಯಂತ ಅಪಾಯಕಾರಿಯಾಗಿದೆ. ಇತ್ತೀಚೆಗೆ 20-12-2025 ರಂದು ಈ ಭಾಗದ ಅನಧಿಕೃತ ಎಸಿ-ಶೀಟ್ ಮನೆಗಳನ್ನು (ಶೆಡ್‌ಗಳನ್ನು) ತೆರವು ಮಾಡಲಾಗಿದೆ.
ಪುನರ್ವಸತಿ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ ಮತ್ತು ಅರ್ಹ ನಿರಾಶ್ರಿತ ವ್ಯಕ್ತಿಗಳನ್ನು ಅನ್ವಯವಾಗುವ ಸರ್ಕಾರಿ ಯೋಜನೆಗಳ ಅಡಿಯಲ್ಲಿ ವಸತಿಗಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ. ಅಕ್ರಮ ವಲಸಿಗರಿಗೆ ಹಾಗೂ ಸರ್ಕಾರದಿಂದ ಪರಿಹಾರ ನೀಡುವ ಅವಶ್ಯಕತೆ ಏನಿದೆ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.
-
Keralam Assembly Elections 2026: ಎಲ್ಡಿಎಫ್ vs ಯುಡಿಎಫ್ ಪೈಪೋಟಿ, ಶಬರಿಮಲೆ ಚಿನ್ನಾಭರಣ ಕಳ್ಳತನ ವಿಷಯವೇ ಪ್ರಮುಖ -
Bengaluru: ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲು ಮುಂದಾದ ಜಿಬಿಎ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications