ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಏರ್‌ ಪೋರ್ಟ್‌ನಲ್ಲಿ 80 ಅಡಿ ಕೆಂಪೇಗೌಡ ಪ್ರತಿಮೆ

|
Google Oneindia Kannada News

ಬೆಂಗಳೂರು, ಜನವರಿ 09 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 80 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲು ತೀರ್ಮಾನಿಸಲಾಗಿದೆ. 23 ಎಕರೆ ಜಾಗದಲ್ಲಿ ಥೀಮ್ ಪಾರ್ಕ್‌ ಅನ್ನು ಸಹ ಸರ್ಕಾರ ನಿರ್ಮಾಣ ಮಾಡಲಿದೆ.

ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಬುಧವಾರ ನಡೆಸಿದರು. ಸಭೆಯ ಬಳಿಕ ಮಾತನಾಡಿ, " ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಜಾಗ ನಿಗದಿ ಮಾಡಲಾಗಿದೆ" ಎಂದರು.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮನರಂಜನಾ ತಾಣ: ವಿಶೇಷತೆಯೇನು?ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮನರಂಜನಾ ತಾಣ: ವಿಶೇಷತೆಯೇನು?

"80 ಅಡಿ ಎತ್ತರದ ಪ್ರತಿಮೆಯ ವಿನ್ಯಾಸ, ಪರಿಕಲ್ಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 23 ಎಕರೆ ಜಾಗದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು ಕೂಡಾ ಉದ್ದೇಶಿಸಲಾಗಿದೆ" ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಕೆಂಪೇಗೌಡ ಅಧ್ಯಯನ ಪೀಠ ವಿವಾದಕ್ಕೆ ಹೊಸ ತಿರುವು.. ಕೆಂಪೇಗೌಡ ಅಧ್ಯಯನ ಪೀಠ ವಿವಾದಕ್ಕೆ ಹೊಸ ತಿರುವು..

80 Feet Kempegowda Statue In KIA Airport

"ಕೆಂಪೇಗೌಡರು ತಮ್ಮ ಆಡಳಿತ ಅವಧಿಯಲ್ಲಿ ಅಭಿವೃದ್ಧಿಪಡಿಸಿದ್ದ 46 ತಾಣಗಳನ್ನು ಗುರುತಿಸಿ ಅವುಗಳನ್ನು ರಕ್ಷಿಸುವ ಜೊತೆಗೆ ಪುನರುಜ್ಜೀವನ ಮಾಡಲು ತಜ್ಞರ ಜೊತೆ ವಿವರವಾಗಿ ಚರ್ಚಿಸಲಾಗಿದೆ. ನಾಡಿಗೆ ಕೆಂಪೇಗೌಡರ ಕೊಡುಗೆ ತಿಳಿಯುವಂತೆ ಮಾಡುವುದು ಸರ್ಕಾರದ ಆಶಯ" ಎಂದರು.

ಇಂದಿರಾ ಕ್ಯಾಂಟೀನ್ ಇನ್ನು ಮುಂದೆ ಕೆಂಪೇಗೌಡ ಕ್ಯಾಂಟಿನ್? ಇಂದಿರಾ ಕ್ಯಾಂಟೀನ್ ಇನ್ನು ಮುಂದೆ ಕೆಂಪೇಗೌಡ ಕ್ಯಾಂಟಿನ್?

2019ರ ಸೆಪ್ಟೆಂಬರ್‌ನಲ್ಲಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ 100 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಇದಕ್ಕೆ ಸುಮಾರು 100 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದರು.

English summary
Deputy Chief Minister C.N. Ashwath Narayan said that Karnataka government will construct 80 feet Nadaprabhu Kempegowda statue on the premises of Kempegowda International Airport, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X