ಪಾನಮತ್ತ ಚಾಲನೆ: 815 ಪ್ರಕರಣ ದಾಖಲು

ಬೆಂಗಳೂರು, ಜು.7: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಚಾಲಕರ ವಿರುದ್ಧ ರಾಜಧಾನಿಯ ಸಂಚಾರ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.

ಶನಿವಾರ ಜು.5ರ ರಾತ್ರಿ 9 ರಿಂದ 2 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯಲ್ಲಿ 815 ಚಾಲಕರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ 100 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 12,789 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಮಡಿವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಅತ್ಯಂತ ಹೆಚ್ಚು 46 ಪ್ರಕರಣ ದಾಖಲಾಗಿದೆ.

Traffic Police
10 ಮ್ಯಾಕ್ಸಿಕಬ್‌, 13 ಟೆಂಪೊ, 18 ಲಾರಿ, 23 ಆಟೊ, 156 ಕಾರು ಚಾಲಕರು ಹಾಗೂ 595 ಬೈಕ್‌ ಸವಾರರು ಪಾನಮತ್ತರಾಗಿ ವಾಹನ ಚಾಲನೆ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿಬಿದ್ದವವರಲ್ಲಿ 814 ಪುರುಷ ಸವಾರರು, ಒಬ್ಬರು ಮಹಿಳಾ ಸವಾರರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.[ಟ್ರಾಫಿಕ್‌ ಪೊಲೀಸರ ಕಷ್ಟ ತಿಳಿಯಬೇಕೆ? ವಿಡಿಯೋ ನೋಡಿ]

ಆಲ್ಕೋ ಮೀಟರ್‌ ಮೂಲಕ ತಪಾಸಣೆ ನಡೆಸಿದಾಗ 7 ಚಾಲಕರ ಮದ್ಯ ಸೇವನೆ ಪ್ರಮಾಣ 550 ಮಿ.ಗ್ರಾಂನಷ್ಟಿತ್ತು. ಈ ಎಲ್ಲಾ ಸವಾರರ ವಾಹನ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+