ವರದಕ್ಷಿಣೆ ಕಿರುಕುಳ: ಬೆಂಗಳೂರಿನ ಬಗ್ಗೆ ಆಘಾತಕಾರಿ ಸಂಗತಿ ಬೆಳಕಿಗೆ
ಬೆಂಗಳೂರು, ಜನವರಿ 11: ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ದೇಶದಲ್ಲಿ ನಡೆದ ಅಪರಾಧಗಳ ಬಗ್ಗೆ ಅಂಕಿಅಂಶಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಬಗ್ಗೆ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗದ 2018 ರ ಅಂಕಿಅಂಶದ ಪ್ರಕಾರ ಬೆಂಗಳೂರು 2018 ರಲ್ಲಿ ದೇಶದಲ್ಲೇ ಅತ್ಯಧಿಕ ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ದಾಖಲಿಸಿಕೊಂಡ ನಗರವಾಗಿದೆ ಎಂದು ತಿಳಿದು ಬಂದಿದೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ 20 ನಗರಗಳ ಪೈಕಿ ಅಂಕಿ ಅಂಶಗಳನ್ನು ತುಲನೆ ಮಾಡಿ ಎನ್‌ಸಿಆಆರ್ ವರದಿ ನೀಡಿದ್ದು, ಶೇ 81 ರಷ್ಟು ವರದಕ್ಷಿಣೆ ಕಿರುಕುಳ ಪ್ರಕರಣಗಳು ಆ ವರ್ಷದಲ್ಲಿ ಬೆಂಗಳೂರಿನಲ್ಲಿಯೇ ನಡೆದಿವೆ ಎಂದು ವರದಿ ಹೇಳಿದೆ.
2018 ರಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ 20 ನಗರಗಳ ಪೇಕಿ 851 ಪ್ರಕರಣಗಳು ಒಟ್ಟಾರೆ ದಾಖಲಾಗಿದ್ದರೆ, ಅದರಲ್ಲಿ 692 ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ದೆಹಲಿ, ಮುಂಬೈ, ಹೈದರಾಬಾದ ಹಾಗೂ ಚೆನ್ನೈನಲ್ಲಿ 159 ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಅಂಕಿಅಂಶಗಳಾಗಿವೆ.

ಬೆಂಗಳೂರು ಹೊರತುಪಡಿಸಿ ದೇಶದ ಇತರ 19 ನಗರಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದ ವರದಕ್ಷಿಣೆ ಕಿರುಕುಳಗಳು ದಾಖಲಾಗಿದ್ದರೆ, ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳು ದಾಖಲಾಗಿ ಅಚ್ಚರಿ ಮೂಡಿಸಿದೆ. ಮಹಿಳಾ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳದ ಬಗ್ಗೆ ಪೊಲೀಸರು ಹಾಗೂ ಮಹಿಳಾ ಸಂಘಟನೆಗಳು ವ್ಯಾಪಕ ಜಾಗೃತಿ ಮೂಡಿಸಿರುವುದರಿಂದ ಹೆಚ್ಚಿನ ಪ್ರಕರಣಗಳು ದಾಖಲಾಗಿರಬಹುದು ಎಂದು ವರದಿ ಹೇಳಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications