ಶನಿವಾರ ರಾತ್ರಿ ಕುಡಿದು ಗಾಡಿ ಓಡಿಸಿದವರ ಲೆಕ್ಕ
ಬೆಂಗಳೂರು, ಜು.28: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಚಾಲಕರ ವಿರುದ್ಧ ರಾಜಧಾನಿಯ ಸಂಚಾರ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಜು.26ರ ರಾತ್ರಿ 9 ರಿಂದ 2 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯಲ್ಲಿ 811 ಚಾಲಕರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ 107 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 11,857 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಪೀಣ್ಯಾ ಸಂಚಾರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಹೆಚ್ಚು 59 ಪ್ರಕರಣ ದಾಖಲಾಗಿದೆ.

12 ಲಾರಿ, 41 ಆಟೊ, 120 ಕಾರು, 13 ಮ್ಯಾಕ್ಸಿಕಬ್, 10 ಟೆಂಪೊ, ಚಾಲಕರು ಹಾಗೂ 615 ಬೈಕ್ ಸವಾರರು ಪಾನಮತ್ತರಾಗಿ ವಾಹನ ಚಾಲನೆ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿಬಿದ್ದವರಲ್ಲಿ 810 ಪುರುಷ ಸವಾರರು ಮತ್ತು ಒಬ್ಬರು ಮಹಿಳೆಯರು ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.['ಸಾರ್ವಜನಿಕ ಕಣ್ಣು' ಅಂದ್ರೇನು ಗೊತ್ತಾ ನಿಮಗೆ?]
ಆಲ್ಕೋ ಮೀಟರ್ ಮೂಲಕ ತಪಾಸಣೆ ನಡೆಸಿದಾಗ 6 ಚಾಲಕರ ಮದ್ಯ ಸೇವನೆ ಪ್ರಮಾಣ 550 ಮಿ.ಗ್ರಾಂನಷ್ಟಿತ್ತು. ಈ ಎಲ್ಲಾ ಸವಾರರ ವಾಹನ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications