ಪಾನಮತ್ತ ಚಾಲನೆ: 870 ಪ್ರಕರಣ ದಾಖಲು
ಬೆಂಗಳೂರು, ಜೂ.16: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಚಾಲಕರ ವಿರುದ್ಧ ರಾಜಧಾನಿಯ ಸಂಚಾರ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಜೂ.14ರ ರಾತ್ರಿ 9 ರಿಂದ 2 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯಲ್ಲಿ ಒಬ್ಬರು ಮಹಿಳೆಯರು ಸೇರಿದಂತೆ 870 ಚಾಲಕರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ 106 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 12,078 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಹೆಚ್ಚು 81 ಪ್ರಕರಣ ದಾಖಲಾಗಿದೆ.

ಆಲ್ಕೋ ಮೀಟರ್ ಮೂಲಕ ತಪಾಸಣೆ ನಡೆಸಿದಾಗ 12 ಚಾಲಕರ ಮದ್ಯ ಸೇವನೆ ಪ್ರಮಾಣ 550 ಮಿ.ಗ್ರಾಂನಷ್ಟಿತ್ತು. ಈ ಎಲ್ಲಾ ಸವಾರರ ವಾಹನ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.












Click it and Unblock the Notifications