ಶನಿವಾರ ರಾತ್ರಿ ಕುಡಿದು ಗಾಡಿ ಓಡಿಸಿದವರ ಲೆಕ್ಕ
ಬೆಂಗಳೂರು, ಜು.14: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಚಾಲಕರ ವಿರುದ್ಧ ರಾಜಧಾನಿಯ ಸಂಚಾರ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಜು.12ರ ರಾತ್ರಿ 9 ರಿಂದ 2 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯಲ್ಲಿ 879 ಚಾಲಕರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ 94 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 12,639 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಮಡಿವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಹೆಚ್ಚು 61 ಪ್ರಕರಣ ದಾಖಲಾಗಿದೆ.[ರಿಚ್ಮಂಡ್ ರಸ್ತೆ ಆರ್‌ಟಿಒ ಜತೆ 'ರಿಚ್' ಯುವತಿ ರಚ್ಚೆ]

14 ಲಾರಿ, 40 ಆಟೊ, 167 ಕಾರು, 16 ಮ್ಯಾಕ್ಸಿಕಬ್, 16 ಟೆಂಪೊ, ಚಾಲಕರು ಹಾಗೂ 626 ಬೈಕ್ ಸವಾರರು ಪಾನಮತ್ತರಾಗಿ ವಾಹನ ಚಾಲನೆ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿಬಿದ್ದವರೆಲ್ಲಾ ಪುರುಷ ಸವಾರರು ಎಂದುಪೊಲೀಸರು ಮಾಹಿತಿ ನೀಡಿದ್ದಾರೆ.['ಸಾರ್ವಜನಿಕ ಕಣ್ಣು' ಅಂದ್ರೇನು ಗೊತ್ತಾ ನಿಮಗೆ?]
ಆಲ್ಕೋ ಮೀಟರ್ ಮೂಲಕ ತಪಾಸಣೆ ನಡೆಸಿದಾಗ 4 ಚಾಲಕರ ಮದ್ಯ ಸೇವನೆ ಪ್ರಮಾಣ 550 ಮಿ.ಗ್ರಾಂನಷ್ಟಿತ್ತು. ಈ ಎಲ್ಲಾ ಸವಾರರ ವಾಹನ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.











Click it and Unblock the Notifications