ಬೆಂಗಳೂರಿನ ಸಮೀಪದಲ್ಲಿ 90 ಎಕರೆ ಭೂಸ್ವಾಧೀನ, ಭೂಮಿ ಬೆಲೆ ಹೆಚ್ಚಳ ನಿರೀಕ್ಷೆ: ಬೃಹತ್ ವಸತಿ ಯೋಜನೆ
ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ಬೃಹತ್ ಯೋಜನೆಯೊಂದನ್ನು ಜಾರಿ ಮಾಡುವುದಕ್ಕೆ ಕರ್ನಾಟಕ ಗೃಹ ಮಂಡಳಿ ಮುಂದಾಗಿದೆ. ಕರ್ನಾಟಕ ಸರ್ಕಾರದ ಈ ಯೋಜನೆಯ ಅನುಷ್ಠಾನಕ್ಕೆ ಬರೋಬ್ಬರಿ 90 ಎಕರೆ ಭೂ ಸ್ವಾಧೀನ ಪಡೆದುಕೊಳ್ಳುವ ಅವಶ್ಯಕತೆ ಇದೆ. ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರವು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇದೀಗ ಬೃಹತ್ ವಸತಿ ಯೋಜನೆಯೊಂದನ್ನು ಜಾರಿ ಮಾಡುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಉದ್ದೇಶಕ್ಕಾಗಿ ಅಂದರೆ ವಸತಿ ಯೋಜನೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ವರದನಹಳ್ಳಿ ಗ್ರಾಮ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿ, ಸುಣ್ಣಘಟ್ಟ ಗ್ರಾಮದಲ್ಲಿ ಜಮೀನುಗಳ ಭೂಸ್ವಾಧೀನ ಅವಶ್ಯಕತೆ ಇದೆ ಎಂದು ಕರ್ನಾಟಕ ಸರ್ಕಾರವು ಹೇಳಿದೆ.
ಈ ಭಾಗದಲ್ಲಿ ಭೂಮಿ ಮಾರಾಟಕ್ಕೆ ಅವಕಾಶ ಇಲ್ಲ
ಇನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013 (2013ರ ಕೇಂದ್ರ ಅಧಿನಿಯಮ ಸಂಖ್ಯೆ: 30)ರ ಕಲಂ-II(1) ಮೇರೆಗೆ ಈ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ, ಸ್ವಾಧೀನಪಡಿಸಿಕೊಳ್ಳಲಿರುವ ಭೂಮಿಯನ್ನು ಒಪ್ಪಂದದ ಮೇರೆಗೆ ಮಾರಾಟ ಮಾಡುವ, ಭೋಗ್ಯಕ್ಕೆ ಅಡವಿಡುವ, ಬಳಕೆಗೆ, ಆಸ್ತಿ ವರ್ಗಾವಣೆ ಅಥವಾ ಇನ್ನೂ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದಂತೆ ನಿರ್ಭಂದಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಈ ರೀತಿಯ ಯಾವುದೇ ಕ್ರಮ ಅಥವಾ ಇನ್ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಲ್ಲಿ ಅದನ್ನು ಕಾನೂನಿನ ಉಲ್ಲಂಘನೆ ಎಂದು ಪರಿಗಣಿಸುವುದಾಗಿ ಹೇಳಲಾಗಿದೆ.
ಈ ಪ್ರದೇಶಗಳಲ್ಲಿ ಭೂಸ್ವಾಧೀನ
ಇನ್ನು ಈ ವಸತಿ ಯೋಜನೆಗೆ ಸಂಬಂಧಿಸಿದಂತೆ ಎರಡು ಗ್ರಾಮಗಳಿಂದ ಭೂಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ವರದನಹಳ್ಳಿ ಗ್ರಾಮ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿ ಹಾಗೂ ಸುಣ್ಣಘಟ್ಟ ಗ್ರಾಮದಲ್ಲಿ ಜಮೀನುಗಳ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಲಾಗಿದೆ.
ವರದನಹಳ್ಳಿ ಹಾಗೂ ಸುಣ್ಣಘಟ್ಟ ಭಾಗದಲ್ಲಿ ಒಟ್ಟು 90 ಎಕರೆ ವಿಸ್ತೀರ್ಣದ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ವರದನಹಳ್ಳಿಯಲ್ಲಿ 50 ಹಾಗೂ ಸುಣ್ಣಘಟ್ಟದಲ್ಲಿ 40 ಎಕರೆ ಸೇರಿದಂತೆ ಒಟ್ಟು 90 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ.
ಮುಂದುವರಿದು ಈ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಕಾಯ್ದೆ-2013 (2013ರ ಕೇಂದ್ರ ಅಧಿನಿಯಮ ಸಂಖ್ಯೆ: 30)ಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಂತೆ ದಿನಾಂಕ: 23-07-2019 ರಿಂದ ಜಾರಿಗೆ ಬಂದಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಮುನರ್‌ವಸತಿ ಮತ್ತು ಪುನರ್ ನಿರ್ಮಾಣ (ಕರ್ನಾಟಕ ತಿದ್ದುಪಡಿ) ಕಾಯ್ದೆ 2019 (2019ರ ಕರ್ನಾಟಕ ಅಧಿನಿಯಮ ಸಂಖ್ಯೆ: 16)ರ ಕಲಂ-10(ಎ)ರಡಿ ಮೂಲ ಕಾಯ್ದೆಯ ಅಧ್ಯಾಯ-II & III ರಲ್ಲಿನ ಉಪಬಂಧಗಳನ್ನು ಅನ್ವಯಿಸುವುದರಿಂದ ವಿನಾಯಿತಿ ನೀಡಿ ಸರ್ಕಾರದ ಸಂಖ್ಯೆ: ಆರ್.ಡಿ.ನಂ.130ಎ.ಕ್ಯೂ.ಬಿ.2025 ದಿನಾಂಕ: 28-08-2025ರ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಅಧಿಸೂಚನೆ ರಾಜ್ಯ ಪತ್ರದಲ್ಲಿ ದಿನಾಂಕ: 09-09-2025 ರಂದು ಪ್ರಕಟವಾಗಿರುತ್ತದೆ ಎಂದು ಹೇಳಿದೆ.
ಇನ್ನು ಈ ಯೋಜನೆಯನ್ನು ಜಾರಿ ಮಾಡುವುದರಿಂದ ಕಡಿಮೆ ಬೆಲೆಯಲ್ಲಿ ಸಾವಿರಾರು ಜನರಿಗೆ ವಸತಿ ಸೌಲಭ್ಯ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications