ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 90 ಲಕ್ಷ ಮತದಾರರು
ಬೆಂಗಳೂರು, ಏಪ್ರಿಲ್ 10 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳ ಪಡುವ ಮೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿ ಅಂತಿಮಗೊಂಡಿದೆ. 90,83,554 ಜನರು ಮತದಾನ ಮಾಡಲು ಅವಕಾಶ ಪಡೆದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳು ಒಳಗೊಂಡಿದ್ದು, ಏಪ್ರಿಲ್ 18ರಂದು ಮತದಾನ ನಡೆಯಲಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 47,33,562 ಪುರುಷರು, 43,48,452 ಮಹಿಳೆಯರು ಮತ್ತು 1,540 ಇತರ ಮತದಾರರು ಸೇರಿ 90,83,554 ಮತದಾರರು ಇದ್ದಾರೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದವರಿಗೆ ಏಪ್ರಿಲ್ 11ರೊಳಗೆ ಗುರುತಿನ ಚೀಟಿಯನ್ನು ನೀಡಲಾಗುತ್ತದೆ.

ಮತ ಎಣಿಕೆ ಕೇಂದ್ರಗಳು : ಏಪ್ರಿಲ್ 18ರಂದು ಮತದಾನ ಮುಗಿದ ಬಳಿಕ ಮಲ್ಯ ಆಸ್ಪತ್ರೆ ಸಮೀಪದ ಸೆಂಟ್ ಜೋಸೆಫ್ ಇಂಡಿಯನ್ ಕಾಲೇಜ್‌ನಲ್ಲಿ ಬೆಂಗಳೂರು ಉತ್ತರ, ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಬೆಂಗಳೂರು ಕೇಂದ್ರ, ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಬೆಂಗಳೂರು ದಕ್ಷಿಣದ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಇಡಲಾಗುತ್ತದೆ. ಮೇ 23ರಂದು ಅಲ್ಲೇ ಮತ ಎಣಿಕೆ ನಡೆಯಲಿದೆ.












Click it and Unblock the Notifications