ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 90 ಲಕ್ಷ ಮತದಾರರು

|
Google Oneindia Kannada News

ಬೆಂಗಳೂರು, ಏಪ್ರಿಲ್ 10 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳ ಪಡುವ ಮೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿ ಅಂತಿಮಗೊಂಡಿದೆ. 90,83,554 ಜನರು ಮತದಾನ ಮಾಡಲು ಅವಕಾಶ ಪಡೆದಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳು ಒಳಗೊಂಡಿದ್ದು, ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 5.10 ಕೋಟಿ ಮತದಾರರುಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 5.10 ಕೋಟಿ ಮತದಾರರು

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 47,33,562 ಪುರುಷರು, 43,48,452 ಮಹಿಳೆಯರು ಮತ್ತು 1,540 ಇತರ ಮತದಾರರು ಸೇರಿ 90,83,554 ಮತದಾರರು ಇದ್ದಾರೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದವರಿಗೆ ಏಪ್ರಿಲ್ 11ರೊಳಗೆ ಗುರುತಿನ ಚೀಟಿಯನ್ನು ನೀಡಲಾಗುತ್ತದೆ.

2ನೇ ಹಂತದ ಲೋಕಸಭಾ ಚುನಾವಣೆ : ಜಿದ್ದಾಜಿದ್ದಿನ 6 ಕ್ಷೇತ್ರಗಳು2ನೇ ಹಂತದ ಲೋಕಸಭಾ ಚುನಾವಣೆ : ಜಿದ್ದಾಜಿದ್ದಿನ 6 ಕ್ಷೇತ್ರಗಳು

90 lakh voters in Bengaluru city three lok sabha seats

ಮತ ಎಣಿಕೆ ಕೇಂದ್ರಗಳು : ಏಪ್ರಿಲ್ 18ರಂದು ಮತದಾನ ಮುಗಿದ ಬಳಿಕ ಮಲ್ಯ ಆಸ್ಪತ್ರೆ ಸಮೀಪದ ಸೆಂಟ್ ಜೋಸೆಫ್ ಇಂಡಿಯನ್ ಕಾಲೇಜ್‌ನಲ್ಲಿ ಬೆಂಗಳೂರು ಉತ್ತರ, ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಬೆಂಗಳೂರು ಕೇಂದ್ರ, ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಬೆಂಗಳೂರು ದಕ್ಷಿಣದ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಇಡಲಾಗುತ್ತದೆ. ಮೇ 23ರಂದು ಅಲ್ಲೇ ಮತ ಎಣಿಕೆ ನಡೆಯಲಿದೆ.

English summary
90,83,554 voters in Bengaluru city under Bruhat Bengaluru Mahanagara Palike. Bangalore North, Bangalore Central and Bangalore South lok sabha seats will go for poll on April 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X