ಮುಂಜಾನೆ 5 ಗಂಟೆಗೆ 29ನೇ ಮಹಡಿಯಿಂದ ಹಾರಿದ ಬಾಲಕಿ: ಕಾರಣವೇನು..?
ಬೆಂಗಳೂರು, ಜನವರಿ 24: ಬಹುಮಹಡಿ ಕಟ್ಟಡದಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಗೂರು ಬಳಿಯ ಅಪಾರ್ಟ್ಮೆಂಟ್ನಲ್ಲಿ ತಂದೆ-ತಾಯಿ ಜೊತೆ ವಾಸವಿದ್ದ 12 ವರ್ಷದ ಬಾಲಕಿ 29ನೇ ಮಹಡಿಯಿಂದ ಬಿದ್ದು ಸಾವಿಗೆ ಶರಣಾಗಿದ್ದಾಳೆ.
ಮೃತ ಬಾಲಕಿ ತಂದೆ ಸಾಫ್ಟ್‌ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿ ಕೆಲಸ ಮಾಡುತ್ತಿದ್ದರು. ಮೃತ ಬಾಲಕಿ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ತಂದೆ-ತಾಯಿಯ ಜೊತೆ ಆತ್ಮೀಯವಾಗಿದ್ದ ಬಾಲಕಿ ಯಾಕೆ ಸಾವಿನ ನಿರ್ಧಾರ ತೆಗೆದುಕೊಂಡಳು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ನಿನ್ನೆ ರಾತ್ರಿ ಮಲಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಮುಂಜಾನೆ 4.30ಕ್ಕೆ ಎಚ್ಚರಗೊಂಡು ಹಾಲ್ಗೆ ಬಂದಿದ್ದಳಂತೆ. ಈ ವೇಳೆ ಬಾಲಕಿಗೆ ತಾಯಿ ಪ್ರಶ್ನೆ ಮಾಡಿದ್ದಳು. ತಾಯಿಗೆ ಸರಿಯಾಗಿ ಉತ್ತರ ಕೊಡದೆ ಮತ್ತೆ ಮಲಗುವುದಾಗಿ ರೂಮಿಗೆ ಹೋಗಿದ್ದಳು. ಆದರೆ 5 ಗಂಟೆ ಸುಮಾರಿಗೆ 29ನೇ ಮಹಡಿಯಿಂದ ಬಾಲಕಿ ಹಾರಿದ್ದಾಳೆ ಎನ್ನಲಾಗಿದೆ.
ಜೋರಾದ ಶಬ್ದ ಕೇಳಿ ಹೊರಬಂದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಬಂದು ನೋಡಿದ್ದಾರೆ. ನಂತರ ಪೋಷಕರಿಗೆ, ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಮಾಹಿತಿ ನೀಡಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್: ವಿಡಿಯೋ ವೈರಲ್
ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಕಾರು ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ದೃಶ್ಯಗಳು ತಡವಾಗಿ ವೈರಲ್ ಆಗಿದೆ. ಬೆಚ್ಚಿಬೀಳಿಸುವ ದೃಶ್ಯಾವಳನ್ನು ಕಂಡು ಜನ ಹೌಹಾರಿದ್ದಾರೆ. ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಕೊಂಡೊಯ್ಯವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications